Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:86 - ಪರಿಶುದ್ದ ಬೈಬಲ್‌

86 ಧೂಪವುಳ್ಳ ಹನ್ನೆರಡು ಚಿನ್ನದ ಧೂಪಾರತಿಗಳಲ್ಲಿ ಪ್ರತಿಯೊಂದು ಧೂಪಾರತಿ ಅಧಿಕೃತ ಅಳತೆಯ ಪ್ರಕಾರ ಹತ್ತು ತೊಲೆ ತೂಕವುಳ್ಳದ್ದಾಗಿತ್ತು. ಹನ್ನೆರಡು ಚಿನ್ನದ ಧೂಪಾರತಿಗಳು ಒಟ್ಟಿಗೆ ನೂರಿಪ್ಪತ್ತು ತೊಲೆಗಳಷ್ಟು ತೂಕವುಳ್ಳದ್ದಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

86 ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

86 ಧೂಫದ್ರವ್ಯ ತುಂಬಿದ್ದ ಚಿನ್ನದ ಧೂಪಾರತಿಗಳು ಹನ್ನೆರಡು; ದೇವಸ್ಥಾನದ ನಾಣ್ಯದ ಪ್ರಕಾರ ಒಂದೊಂದರ ತೂಕ 10 ಶೆಕೆಲ್. ಹೀಗೆ ಸರ್ವೇಶ್ವರ ಸ್ವಾಮಿ ಆತನೊಡನೆ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

86 ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವರ ಸೇವೆಗೆ ನೇಮಕವಾದ ತೊಲೆಯ ಪ್ರಕಾರ ಹತ್ತು ಹತ್ತು ತೊಲೆಯ ಮೇರೆಗೆ ಇರುವದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ತೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

86 ಧೂಪ ತುಂಬಿದ್ದ 12 ಬಂಗಾರದ ಚಮಚಗಳು, ಪರಿಶುದ್ಧಸ್ಥಳದ ಪ್ರಕಾರ ಒಂದೊಂದಕ್ಕೆ 10 ಚಮಚಗಳ ಬಂಗಾರವೆಲ್ಲಾ 120 ಶೆಕೆಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:86
6 ತಿಳಿವುಗಳ ಹೋಲಿಕೆ  

ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು.


ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.


ಪ್ರತಿಯೊಂದು ಬೆಳ್ಳಿಯ ತಟ್ಟೆಯ ತೂಕ ಸುಮಾರು ಮೂರುಕಾಲು ಪೌಂಡುಗಳು, ಪ್ರತಿ ಬಟ್ಟಲು ಸುಮಾರು ಮೂರುಮುಕ್ಕಾಲು ಪೌಂಡು ತೂಕವುಳ್ಳದ್ದಾಗಿದ್ದವು. ಬೆಳ್ಳಿಯ ತಟ್ಟೆಗಳು ಮತ್ತು ಬೆಳ್ಳಿಯ ಬಟ್ಟಲುಗಳು ಒಟ್ಟಿಗೆ ಅಧಿಕೃತ ಅಳತೆಯ ಪ್ರಕಾರ ಅರವತ್ತು ಪೌಂಡುಗಳಷ್ಟು ತೂಕವಾಗಿದ್ದವು.


ಸರ್ವಾಂಗಹೋಮಕ್ಕಾಗಿ ಉಪಯೋಗಿಸಲ್ಪಟ್ಟ ಒಟ್ಟು ಪಶುಗಳು: ಹನ್ನೆರಡು ಹೋರಿಗಳು, ಹನ್ನೆರಡು ಟಗರುಗಳು, ಒಂದು ವರ್ಷದ ಎರಡು ಗಂಡು ಕುರಿಮರಿಗಳು. ಆ ಸಮರ್ಪಣೆಗಳೊಂದಿಗೆ ಧಾನ್ಯಸಮರ್ಪಣೆಗಳೂ ಅರ್ಪಿಸಲ್ಪಟ್ಟವು. ದೋಷಪರಿಹಾರಕ ಯಜ್ಞವಾಗಿ ಹನ್ನೆರಡು ಹೋತಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟವು.


ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು