Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:12 - ಪರಿಶುದ್ದ ಬೈಬಲ್‌

12 “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ, ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಇನ್ನೊಂದು ಹೋರಿಯನ್ನೂ ಸಮರ್ಪಿಸಬೇಕು. ಇವು ಲೇವಿಯರಿಗೆ ನೈವೇದ್ಯದ ಸಮರ್ಪಣೆಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಸರ್ವೇಶ್ವರನಿಗೆ ಪಾಪಪರಿಹಾರಕ ಬಲಿಗಾಗಿ ಒಂದು ಹೋರಿಯನ್ನು, ಹಾಗು ದಹನಬಲಿಗಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಿ ಅವರಿಗಾಗಿ ಪಾಪಪರಿಹಾರವನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಯೆಹೋವನಿಗೆ ದೋಷಪರಿಹಾರಕಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನೂ ಸಮರ್ಪಿಸಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:12
25 ತಿಳಿವುಗಳ ಹೋಲಿಕೆ  

“ತರುವಾಯ ನೀನು ಹೋರಿಯನ್ನು ದೇವದರ್ಶನಗುಡಾರದ ಎದುರಿಗೆ ತರಬೇಕು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು.


ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.


“ತರುವಾಯ ಲೇವಿಯರು ಸರ್ವಾಂಗಹೋಮಕ್ಕಾಗಿ ಒಂದು ಎಳೆಹೋರಿಯನ್ನು ಮತ್ತು ಅದರೊಡನೆ ಸಮರ್ಪಿಸಬೇಕಾದ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಯಹಿಟ್ಟನ್ನು ತೆಗೆದುಕೊಂಡು ಬರಬೇಕು; ನೀನು ಅವರಿಂದ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಎಳೆಹೋರಿಯನ್ನು ತೆಗೆದುಕೊಳ್ಳಬೇಕು.


“ಬಳಿಕ ಯಾಜಕನು ಇವುಗಳನ್ನು ಯೆಹೋವನ ಬಳಿಗೆ ತಂದು ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಮಾಡುವನು.


ಯೆಹೋವನಿಗೆ ತನ್ನ ಸಮರ್ಪಣೆಯನ್ನು ಮಾಡಬೇಕು. ಅವನು ಸಮರ್ಪಿಸಬೇಕಾದದು ಯಾವುವೆಂದರೆ, ಸರ್ವಾಂಗಹೋಮಕ್ಕೆ ದೋಷವಿಲ್ಲದ ಒಂದು ವರ್ಷದ ಗಂಡು ಕುರಿಮರಿ, ದೋಷಪರಿಹಾರ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ವರ್ಷದ ಹೆಣ್ಣು ಕುರಿಮರಿ, ಸಮಾಧಾನಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ಟಗರು ಇವೇ.


ಆರೋನನು ಸಜೀವವಾದ ಹೋತದ ತಲೆಯ ಮೇಲೆ ತನ್ನ ಎರಡು ಕೈಗಳನ್ನಿಟ್ಟು ಇಸ್ರೇಲರು ಮಾಡಿದ ಪಾಪಗಳನ್ನು ಮತ್ತು ದ್ರೋಹಗಳನ್ನು ಅರಿಕೆಮಾಡುವನು. ಹೀಗೆ ಆರೋನನು ಜನರ ಪಾಪಗಳನ್ನು ಹೋತದ ತಲೆಯ ಮೇಲೆ ಹೊರಿಸುವನು. ಬಳಿಕ ಅವನು ಹೋತವನ್ನು ಮರುಭೂಮಿಗೆ ಕಳುಹಿಸಿಬಿಡುವನು. ಒಬ್ಬ ಮನುಷ್ಯನು ಹೋತವನ್ನು ನಡಿಸಿಕೊಂಡು ಹೋಗಲು ಸಿದ್ಧನಾಗಿ ನಿಂತಿರುವನು.


“ಬಳಿಕ ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸುವನು. ಆರೋನನು ತನಗಾಗಿಯೂ ತನ್ನ ಕುಟುಂಬದವರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ವಧಿಸುವನು.


ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.


ಎರಡು ಬೆಳವಕ್ಕಿಗಳನ್ನು ಮತ್ತು ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಳ್ಳಬೇಕು. ಬಡವರು ಸಹ ಅವುಗಳನ್ನು ಕೊಡಲು ಶಕ್ತರಾಗಿರುವರು. ಒಂದು ಪಕ್ಷಿಯು ಪಾಪಪರಿಹಾರಕ ಯಜ್ಞಕ್ಕಾಗಿಯೂ ಇನ್ನೊಂದು ಪಕ್ಷಿಯು ಸರ್ವಾಂಗಹೋಮಕ್ಕಾಗಿಯೂ ಇರುತ್ತದೆ.


ಮೋಶೆಯು ಆರೋನನಿಗೆ, “ಯೆಹೋವನು ಆಜ್ಞಾಪಿಸಿದವುಗಳನ್ನು ಮಾಡು. ಯಜ್ಞವೇದಿಕೆಯ ಬಳಿಗೆ ಹೋಗಿ ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಅರ್ಪಿಸು. ನಿನ್ನನ್ನೂ ಜನರನ್ನೂ ಶುದ್ಧಿಮಾಡುವ ಆ ಕಾರ್ಯಗಳನ್ನು ಮಾಡು. ಜನರು ತಂದದ್ದನ್ನು ತೆಗೆದುಕೊಂಡು ಅವರಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿ ಅವರನ್ನು ಶುದ್ಧಿಮಾಡು” ಎಂದು ಹೇಳಿದನು.


ಈ ದಿನದಲ್ಲಿ ಮಾಡಿದ ಸಕಲಕಾರ್ಯಗಳನ್ನು ಏಳು ದಿನವೂ ಮಾಡಬೇಕು.


ಬಳಿಕ ಮೋಶೆಯು ಸರ್ವಾಂಗಹೋಮದ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.


“ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.


ಅಭಿಷಿಕ್ತನಾದ ಯಾಜಕನು ಹೋರಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಜನರ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ತರುವಾಯ ಒಬ್ಬನು ಯೆಹೋವನ ಸನ್ನಿಧಿಯಲ್ಲಿ ಹೋರಿಯನ್ನು ವಧಿಸಬೇಕು.


ಈ ರೀತಿಯಲ್ಲಿ ನೀನು ಲೇವಿಯರನ್ನು ಆರೋನ ಮತ್ತು ಅವನ ಪುತ್ರರ ಅಧೀನದಲ್ಲಿ ಸೇವೆ ಮಾಡುವಂತೆ ಮಾಡುವೆ ಮತ್ತು ಲೇವಿಯರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಸಲ್ಲಿಸುವೆ.


ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು