ಅರಣ್ಯಕಾಂಡ 8:13 - ಪರಿಶುದ್ದ ಬೈಬಲ್13 ಈ ರೀತಿಯಲ್ಲಿ ನೀನು ಲೇವಿಯರನ್ನು ಆರೋನ ಮತ್ತು ಅವನ ಪುತ್ರರ ಅಧೀನದಲ್ಲಿ ಸೇವೆ ಮಾಡುವಂತೆ ಮಾಡುವೆ ಮತ್ತು ಲೇವಿಯರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಸಲ್ಲಿಸುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಸರ್ವೇಶ್ವರನಿಗೆ ಸಮರ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.