ಅರಣ್ಯಕಾಂಡ 8:17 - ಪರಿಶುದ್ದ ಬೈಬಲ್17 ಇಸ್ರೇಲರಲ್ಲಿ ಚೊಚ್ಚಲಾದ ಮನುಷ್ಯರೂ ಪಶುಗಳೂ ನನ್ನ ಸ್ವತ್ತಾಗಿರುವರು. ಈಜಿಪ್ಟ್ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲ ನಾನು ಸಂಹರಿಸಿದಾಗ ಇಸ್ರೇಲರ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸ್ವಂತ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದುದನ್ನು ನಾನು ಸಂಹರಿಸಿದಾಗ ಇಸ್ರಾಯೇಲರ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಸ್ರಯೇಲರಲ್ಲಿ ಚೊಚ್ಚಲಾದ ಮನುಷ್ಯರೂ ಪಶುಪ್ರಾಣಿಗಳೆಲ್ಲವೂ ನನ್ನ ಸೊತ್ತೆಂಬುದೇನೋ ನಿಜ; ಈಜಿಪ್ಟ್ ದೇಶದಲ್ಲಿ ಚೊಚ್ಚಲಾದುದನ್ನೆಲ್ಲ ಸಂಹರಿಸಿದಾಗ ಇಸ್ರಯೇಲರಲ್ಲಿ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಾಪಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸೊತ್ತಷ್ಟೆ; ಐಗುಪ್ತದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲ್ಯರ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು. ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲು ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲು ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲು ಗಂಡುಮಕ್ಕಳು ಮತ್ತು ಚೊಚ್ಚಲು ಪಶುಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು!”