Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:19 - ಪರಿಶುದ್ದ ಬೈಬಲ್‌

19 ಇಸ್ರೇಲರ ಮಧ್ಯದಿಂದ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ ಮತ್ತು ದೇವದರ್ಶನಗುಡಾರದಲ್ಲಿ ಇಸ್ರೇಲರ ಪರವಾಗಿ ಕೆಲಸ ಮಾಡಲೂ ಮತ್ತು ಇಸ್ರೇಲರಿಗೆ ದೋಷಪರಿಹಾರ ಮಾಡುವುದಕ್ಕೂ ನಾನು ಅವರನ್ನು ಆರೋನ ಮತ್ತು ಅವನ ಪುತ್ರರಿಗೆ ಒಪ್ಪಿಸಿಕೊಟ್ಟಿದ್ದೇನೆ. ಇಸ್ರೇಲರನ್ನು ಶುದ್ಧಿಗೊಳಿಸುವ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಅವರು ಸಹಾಯ ಮಾಡುವರು. ಹೀಗಿರುವುದರಿಂದ ಇಸ್ರೇಲರು ಪವಿತ್ರವಸ್ತುಗಳ ಅತೀ ಸಮೀಪಕ್ಕೆ ಬಂದರೂ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಸ್ರಯೇಲರ ಪರವಾಗಿ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡೆಸುವುದಕ್ಕೂ ಪಾಪಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರಿಸಿಕೊಂಡು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಆದುದರಿಂದ ಇಸ್ರಯೇಲರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಯಾವ ಅಪಾಯವು ಸಂಭವಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಸ್ರಾಯೇಲ್ಯರಿಗೋಸ್ಕರ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡಿಸುವದಕ್ಕೂ ದೋಷಪರಿಹಾರವನ್ನು ಮಾಡುವದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವದರಿಂದ ಇಸ್ರಾಯೇಲ್ಯರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:19
12 ತಿಳಿವುಗಳ ಹೋಲಿಕೆ  

ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”


ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.


ಆದರೆ ಯಾಜಕರಿಲ್ಲದ ಕಾರಣ ಬೇತ್‌ಷೆಮೆಷಿನ ಜನರು ಪವಿತ್ರ ಪೆಟ್ಟಿಗೆಯನ್ನು ಹಣಿಕಿ ನೋಡಿದ್ದರಿಂದ ಬೇತ್‌ಷೆಮೆಷಿನ ಎಪ್ಪತ್ತು ಜನರನ್ನು ಯೆಹೋವನು ಕೊಂದನು. ಯೆಹೋವನು ಕ್ರೂರವಾಗಿ ಶಿಕ್ಷಿಸಿದ್ದರಿಂದ ಬೇತ್‌ಷೆಮೆಷಿನ ಜನರು ಗೋಳಾಡಿ,


ಆದರೆ ಈಗ ನಾನು ಇಸ್ರೇಲರ ಚೊಚ್ಚಲು ಗಂಡುಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಳ್ಳುವೆನು.


ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆ ಮೋಶೆ ಆರೋನರೂ ಇಸ್ರೇಲರ ಸಮೂಹದವರೆಲ್ಲರೂ ಮಾಡಿದರು.


ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರೇಲರೆಲ್ಲರೂ ಮಾಡಿದರು.


ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು