ಅರಣ್ಯಕಾಂಡ 8:2 - ಪರಿಶುದ್ದ ಬೈಬಲ್2 “ಆರೋನನು ಪವಿತ್ರಗುಡಾರದಲ್ಲಿ ದೀಪಸ್ತಂಭದ ಮೇಲಿನ ದೀಪಗಳನ್ನು ಕ್ರಮಪಡಿಸಲು ಹೇಳು. ಆಗ ದೀಪಸ್ತಂಭದ ಮುಂದಿನ ಸ್ಥಳದಲ್ಲಿ ಬೆಳಕು ಪ್ರಕಾಶಿಸುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಆರೋನನು ದೇವಸ್ಥಾನದ ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಬೆಳಕು ಕೊಡುವಂತೆ ನೋಡಿಕೊಳ್ಳಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.” ಅಧ್ಯಾಯವನ್ನು ನೋಡಿ |