22 ಆಗ ಲೇವಿಯರು ದೇವದರ್ಶನಗುಡಾರದಲ್ಲಿ ಆರೋನನ ಮತ್ತು ಅವನ ಪುತ್ರರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡಲು ಅರ್ಹರಾದರು. ಯೆಹೋವನು ಮೋಶೆಗೆ ಲೇವಿಯರ ಬಗ್ಗೆ ಆಜ್ಞಾಪಿಸಿದ್ದಂತೆಯೇ ಅವರಿಗೆ ಮಾಡಲಾಯಿತು.
22 ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
22 ಇದಾದ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡೆಸಲಾರಂಭಿಸಿದರು. ಅವರ ಬಗ್ಗೆ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.
22 ಆಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡಿಸಲಾರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.
22 ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು.
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.
ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಬಳಿಕ ಆರೋನನು ಅವರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಕೊಟ್ಟನು. ಆರೋನನು ಅವರನ್ನು ಶುದ್ಧೀಕರಿಸುವುದಕ್ಕಾಗಿ ದೋಷಪರಿಹಾರ ಮಾಡಿದನು.
ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.