ಅರಣ್ಯಕಾಂಡ 8:4 - ಪರಿಶುದ್ದ ಬೈಬಲ್4 ಆ ದೀಪಸ್ತಂಭವನ್ನು ಅದರ ಬುಡದಿಂದ ಪುಷ್ಪಾಲಂಕಾರಗಳವರೆಗೂ ಸಂಪೂರ್ಣವಾಗಿ ಚಿನ್ನದ ತಗಡಿನಿಂದ ಮಾಡಲಾಗಿತ್ತು. ಯೆಹೋವನು ಮೋಶೆಗೆ ತೋರಿಸಿದ ಮಾದರಿಯಂತೆ ಅದು ಮಾಡಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ದೀಪಸ್ತಂಭದ ಬುಡಭಾಗವೂ ಅದರ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿದ್ದವು. ಸರ್ವೇಶ್ವರ ತೋರಿಸಿದ್ದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ದೀಪಸ್ತಂಭವು ಅದರ ಬುಡವೂ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು. ಅಧ್ಯಾಯವನ್ನು ನೋಡಿ |