ಅರಣ್ಯಕಾಂಡ 8:8 - ಪರಿಶುದ್ದ ಬೈಬಲ್8 “ತರುವಾಯ ಲೇವಿಯರು ಸರ್ವಾಂಗಹೋಮಕ್ಕಾಗಿ ಒಂದು ಎಳೆಹೋರಿಯನ್ನು ಮತ್ತು ಅದರೊಡನೆ ಸಮರ್ಪಿಸಬೇಕಾದ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಯಹಿಟ್ಟನ್ನು ತೆಗೆದುಕೊಂಡು ಬರಬೇಕು; ನೀನು ಅವರಿಂದ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಎಳೆಹೋರಿಯನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ತರುವಾಯ ಅವರು ಸರ್ವಾಂಗಹೊಮಕ್ಕಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆ ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಳಿಕ ಅವರು ದಹನಬಲಿಗಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯವನ್ನೂ, ಅಂದರೆ ಎಣ್ಣೆಬೆರೆಸಿದ ಗೋದಿಯ ಹಿಟ್ಟನ್ನೂ ಮತ್ತು ಪಾಪಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತರುವಾಯ ಅವರು [ಸರ್ವಾಂಗಹೋಮಕ್ಕಾಗಿ] ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆಬೆರಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.