Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:1 - ಪರಿಶುದ್ದ ಬೈಬಲ್‌

1 ಇಸ್ರೇಲರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ನಂತರ ಎರಡನೆ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ಐಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ, ಸೀನಾಯಿ ಅರಣ್ಯದಲ್ಲಿ ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಯೊಂದಿಗೆ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟುಬಂದ ಎರಡನೆಯ ವರುಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಅರಣ್ಯದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:1
5 ತಿಳಿವುಗಳ ಹೋಲಿಕೆ  

ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


“ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.


ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.


ಆದ್ದರಿಂದ ಪವಿತ್ರಗುಡಾರವು, ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು.


“ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು