ಅರಣ್ಯಕಾಂಡ 9:10 - ಪರಿಶುದ್ದ ಬೈಬಲ್10 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು - ‘ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಾಗಲಿ ಶವ ಸೋಂಕಿದುದರಿಂದ ಅಶುದ್ಧರಾದವರು ಮಾತ್ರವಲ್ಲ ದೂರ ಪ್ರಯಾಣದಲ್ಲಿರುವವರು ಕೂಡ ಸರ್ವೇಶ್ವರನ ಆಜ್ಞಾನುಸಾರ ಪಾಸ್ಕ ಹಬ್ಬವನ್ನು ಆಚರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಶವಸೋಂಕಿದದರಿಂದ ಅಶುದ್ಧರಾದವರೂ ದೂರ ಪ್ರಯಾಣದಲ್ಲಿರುವವರೂ ಕೂಡ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿ |
ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು.