Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:11 - ಪರಿಶುದ್ದ ಬೈಬಲ್‌

11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಅದನ್ನು ಆಚರಿಸಬೇಕು. ಹುಳಿಯಿಲ್ಲದ ರೊಟ್ಟಿ ಮತ್ತು ಕಹಿಯಾದ ಸೊಪ್ಪುಸದೆಗಳೊಂದಿಗೆ ಅದನ್ನು ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:11
7 ತಿಳಿವುಗಳ ಹೋಲಿಕೆ  

ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ” ಎಂಬ ಮಾತು ಹೀಗೆ ನೆರವೇರಿತು.


ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.


ಅವರು ಈ ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”


“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು