Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:15 - ಪರಿಶುದ್ದ ಬೈಬಲ್‌

15 ಇಸ್ರೇಲರು ಒಡಂಬಡಿಕೆಯ ಗುಡಾರವಾದ ಪವಿತ್ರ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು ಮತ್ತು ಅದು ರಾತ್ರಿಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದಾಗ ಮೇಘವೊಂದು ಅದರ ಮೇಲೆ ಆವರಿಸಿಕೊಂಡಿತು. ಸಂಜೆಯಿಂದ ಮುಂಜಾನೆಯವರೆಗೂ ಅದು ಬೆಂಕಿಯಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರವನ್ನು ಮುಚ್ಚಿತು. ಸಂಜೆಯಿಂದ ಮುಂಜಾನೆಯವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:15
21 ತಿಳಿವುಗಳ ಹೋಲಿಕೆ  

ಯೆಹೋವನು ದಾರಿಯನ್ನು ತೋರಿಸಿದನು. ಹಗಲಿನಲ್ಲಿ ಜನರನ್ನು ನಡಿಸಲು ಯೆಹೋವನು ಎತ್ತರವಾದ ಮೇಘಸ್ತಂಭವನ್ನು ಉಪಯೋಗಿಸಿದನು; ರಾತ್ರಿ ವೇಳೆಯಲ್ಲಿ ದಾರಿಯನ್ನು ತೋರಿಸಲು ಯೆಹೋವನು ಎತ್ತರವಾದ ಅಗ್ನಿಸ್ತಂಭವನ್ನು ಉಪಯೋಗಿಸಿದನು. ಈ ಬೆಂಕಿಯು ಅವರಿಗೆ ಬೆಳಕು ಕೊಟ್ಟಿದ್ದರಿಂದ ಅವರು ರಾತ್ರಿಯಲ್ಲಿ ಪ್ರಯಾಣ ಮಾಡಲು ಸಾಧ್ಯವಾಯಿತು.


ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.


ಹಗಲಿನಲ್ಲಿ ಮೋಡದಿಂದಲೂ ಇರುಳಿನಲ್ಲಿ ಬೆಂಕಿಯ ಬೆಳಕಿನಿಂದಲೂ ಅವರನ್ನು ಮುನ್ನಡೆಸಿದನು.


ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.


ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;


ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು.


ಆತನು ಹಗಲಿನಲ್ಲಿ ನೆರಳಿಗೋಸ್ಕರ ಮೋಡವನ್ನು ಕಂಬಳಿಯಂತೆ ಹರಡಿದನು; ರಾತ್ರಿಯಲ್ಲಿ ಬೆಳಕಿಗಾಗಿ ಅಗ್ನಿಸ್ತಂಭವನ್ನು ದಯಪಾಲಿಸಿದನು.


ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ.


ಅದಲ್ಲದೆ, ಈ ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷನಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ.


ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು.


“ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.


ಬೆಳಗಿನ ಜಾವ ಇನ್ನೂ ಮೊಬ್ಬಿರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ಧಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿಮಾಡಿದನು.


ಹಗಲಿನಲ್ಲಿ ಎತ್ತರವಾದ ಮೇಘಸ್ತಂಭವೂ ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವೂ ಯಾವಾಗಲೂ ಅವರ ಮುಂಭಾಗದಲ್ಲಿ ಅವರೊಂದಿಗಿದ್ದವು.


ಅವರು ಪಾಳೆಯದೊಡನೆ ಹೊರಟಾಗ ಪ್ರತಿದಿನವೂ ಯೆಹೋವನ ಮೋಡವು ಅವರ ಮೇಲಿರುತ್ತಿತ್ತು.


ಮೋಶೆ ಆ ಕೋಲುಗಳನ್ನು ಒಡಂಬಡಿಕೆಯ ಗುಡಾರದಲ್ಲಿ ಯೆಹೋವನ ಮುಂದೆ ಇಟ್ಟನು.


ನೀವು ಪ್ರಯಾಣ ಮಾಡುತ್ತಿರುವಾಗ ಆತನು ನಿಮ್ಮ ಮುಂದೆ ಹೋದನು. ತಂಗಲು ಯೋಗ್ಯವಾದ ಸ್ಥಳದಲ್ಲಿ ನೀವು ಪಾಳೆಯ ಮಾಡಿಕೊಳ್ಳುವಂತೆ ಮಾಡಿದನು. ಹಗಲಲ್ಲಿ ಮೇಘಸ್ತಂಭವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭವಾಗಿಯೂ ಆತನು ನಿಮಗೆ ಮಾರ್ಗದರ್ಶಕನಾಗಿದ್ದನು.


ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು