Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:17 - ಪರಿಶುದ್ದ ಬೈಬಲ್‌

17 ಆ ಮೇಘವು ಪವಿತ್ರ ಗುಡಾರದಿಂದ ಮೇಲಕ್ಕೆ ಎದ್ದಾಗಲೆಲ್ಲಾ ಇಸ್ರೇಲರು ಮುಂದಕ್ಕೆ ಪ್ರಯಾಣಮಾಡುವರು. ಆ ಮೇಘವು ನಿಂತಲ್ಲೆಲ್ಲಾ ಇಸ್ರೇಲರು ಪಾಳೆಯ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. ಆ ಮೇಘ ಎಲ್ಲಿ ನಿಲ್ಲುತ್ತಿತ್ತೋ ಅಲ್ಲೇ ಇಸ್ರಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲ್ಯರು ಮುಂದಕ್ಕೆ ಪ್ರಯಾಣಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:17
12 ತಿಳಿವುಗಳ ಹೋಲಿಕೆ  

ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು.


ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ.


ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಇಸ್ರೇಲರೆಲ್ಲರೂ ಸಿನ್ ಮರುಭೂಮಿಯಿಂದ ಒಟ್ಟಾಗಿ ಪ್ರಯಾಣಮಾಡಿದರು. ಯೆಹೋವನು ಆಜ್ಞಾಪಿಸಿದಂತೆಲ್ಲಾ ಅವರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡಿದರು. ಅವರು ರೆಫೀದೀಮಿಗೆ ಪ್ರಯಾಣಮಾಡಿ ಅಲ್ಲಿ ತಂಗಿದರು. ಅವರಿಗೆ ಕುಡಿಯಲು ಅಲ್ಲಿ ನೀರಿರಲಿಲ್ಲ.


ಆ ಮೇಘವು ಪವಿತ್ರಗುಡಾರದ ಮೇಲೆ ಎರಡು ದಿನವಾಗಲಿ ಒಂದು ತಿಂಗಳಾಗಲಿ ಒಂದು ವರ್ಷವಾಗಲಿ ನಿಂತರೆ ಅದು ನಿಂತಿರುವ ತನಕ ಇಸ್ರೇಲರು ಪ್ರಯಾಣ ಮಾಡದೆ ಇಳಿದುಕೊಂಡೇ ಇರುವರು. ಅದು ಮೇಲಕ್ಕೆ ಎದ್ದಾಗ ಅವರು ಹೊರಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು