ಅರಣ್ಯಕಾಂಡ 9:18 - ಪರಿಶುದ್ದ ಬೈಬಲ್18 ಇಸ್ರೇಲರು ಯೆಹೋವನ ಸೂಚನೆಯನ್ನು ಹೊಂದಿದ ಮೇಲೆ ಪ್ರಯಾಣಮಾಡುವರು. ಆ ಮೋಡವು ಪವಿತ್ರಗುಡಾರದ ಮೇಲಿರುವ ತನಕ ಅವರು ತಾವಿರುವಲ್ಲಿಯೇ ಇರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರನ ಅಪ್ಪಣೆಯನ್ನು ಹೊಂದಿಯೇ ಅವರು ಪ್ರಯಾಣ ಮಾಡುತ್ತಿದ್ದರು. ಸರ್ವೇಶ್ವರನ ಅಪ್ಪಣೆಯನ್ನು ಪಡೆದು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಮೇಘವು ಎಲ್ಲಿ ನಿಲ್ಲುವದೋ ಅಲ್ಲಿ ಇಸ್ರಾಯೇಲ್ಯರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲ್ಯರು ಪ್ರಯಾಣಮಾಡುವರು; ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರ ಆಜ್ಞೆಯ ಪ್ರಕಾರ ಇಸ್ರಾಯೇಲರು ಪ್ರಯಾಣಮಾಡಿದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿ |