Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:20 - ಪರಿಶುದ್ದ ಬೈಬಲ್‌

20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಪವಿತ್ರ ಗುಡಾರದ ಮೇಲೆ ನಿಂತಿರುವುದು. ಯೆಹೋವನ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಿದ್ದರು ಮತ್ತು ಯೆಹೋವನ ಆಜ್ಞೆಯ ಪ್ರಕಾರ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಒಂದೊಂದು ವೇಳೆ ಆ ಮೇಘ ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಸರ್ವೇಶ್ವರನ ಆಜ್ಞಾನುಸಾರ ಅವರು ಹಾಗೆಯೇ ಇಳಿದುಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞಾನುಸಾರವಾಗಿಯೇ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುವದು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳುಕೊಳ್ಳುತ್ತಿದ್ದರು, ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ, ಅವರು ಯೆಹೋವ ದೇವರ ಆಜ್ಞೆಯ ಪ್ರಕಾರ ಇಳಿದುಕೊಳ್ಳುತ್ತಿದ್ದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:20
8 ತಿಳಿವುಗಳ ಹೋಲಿಕೆ  

ಕೆಲವು ಬಾರಿ ಆ ಮೇಘವು ಬಹುದಿನಗಳವರೆಗೂ ಪವಿತ್ರಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರೇಲರು ಯೆಹೋವನಿಗೆ ವಿಧೇಯರಾಗಿ ಮುಂದಕ್ಕೆ ಪ್ರಯಾಣಮಾಡಲಿಲ್ಲ.


ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಹೊತ್ತಾರೆಯವರೆಗೂ ಇರುತ್ತಿತ್ತು; ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಮೋಡವು ಚಲಿಸಿದಾಗ ಅದು ಹಗಲಾಗಿರಲಿ ರಾತ್ರಿಯಾಗಿರಲಿ ಜನರು ಅದನ್ನು ಹಿಂಬಾಲಿಸುವರು.


ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!


ಯೆಹೋವನಲ್ಲಿ ಸಂಪೂರ್ಣವಾಗಿ ಭರವಸೆ ಇಡು. ನಿನ್ನ ಸ್ವಂತ ಜ್ಞಾನವನ್ನು ಅವಲಂಬಿಸಬೇಡ.


ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.


ಇಸ್ರೇಲರು ಯೆಹೋವನ ಸೂಚನೆಯನ್ನು ಹೊಂದಿದ ಮೇಲೆ ಪ್ರಯಾಣಮಾಡುವರು. ಆ ಮೋಡವು ಪವಿತ್ರಗುಡಾರದ ಮೇಲಿರುವ ತನಕ ಅವರು ತಾವಿರುವಲ್ಲಿಯೇ ಇರುವರು.


ಯೆಹೋವನು ಮೋಶೆಯ ಮೂಲಕ ಕೊಟ್ಟ ಸೂಚನೆಯ ಪ್ರಕಾರ ಅವರು ಮೊಟ್ಟಮೊದಲನೆಯ ಸಲ ಪ್ರಯಾಣವನ್ನು ಆರಂಭಿಸಿದರು.


ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು