Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:11 - ಪರಿಶುದ್ದ ಬೈಬಲ್‌

11 ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ದೇವರು - ಭೂವಿುಯು ಹುಲ್ಲನ್ನೂ ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಸಲಿ; ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನೂ ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ ಎಂದು ಹೇಳಿದನು; ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:11
20 ತಿಳಿವುಗಳ ಹೋಲಿಕೆ  

ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.


ಆತನು ಆಕಾಶವನ್ನು ಮೋಡಗಳಿಂದ ತುಂಬಿಸುವನು; ಭೂಮಿಗಾಗಿ ಮಳೆಯನ್ನು ಸುರಿಸುವನು; ಬೆಟ್ಟಗಳ ಮೇಲೆ ಹುಲ್ಲನ್ನು ಬೆಳೆಯಮಾಡುವನು.


ಇದಲ್ಲದೆ ದೇವರು ಅವರಿಗೆ, “ಬೀಜಫಲಿಸುವ ಎಲ್ಲಾ ಸಸಿಗಳನ್ನು ಮತ್ತು ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಎಲ್ಲಾ ಮರಗಳನ್ನು ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.


ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.


ಭೂಮಿಯು ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೇ ತಾನೇ ಉತ್ಪತ್ತಿಮಾಡುತ್ತದೆ.


ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!


ಭೂಮಿಯ ಮೇಲ್ಭಾಗದಿಂದ ಆಹಾರವು ಬೆಳೆಯುತ್ತದೆ. ಭೂಮಿಯ ಕೆಳಭಾಗವಾದರೋ ಬೆಂಕಿಯಿಂದ ಕರಗಿಹೋದಂತಿರುವುದು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡಲು ಯಾರೂ ಇರಲಿಲ್ಲ.


ನನ್ನ ಸಹೋದರ ಸಹೋದರಿಯರೇ, ಅಂಜೂರದ ಮರವು ಆಲಿವ್ ಕಾಯಿಗಳನ್ನು ಬಿಡುವುದೇ? ಇಲ್ಲ! ದ್ರಾಕ್ಷಿಬಳ್ಳಿಯು ಅಂಜೂರದ ಹಣ್ಣನ್ನು ಬಿಡುವುದೇ? ಇಲ್ಲ! ಉಪ್ಪು ನೀರಿನಿಂದ ತುಂಬಿದ ಬಾವಿಯು ಸಿಹಿ ನೀರನ್ನು ಕೊಡುವುದಿಲ್ಲ.


ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.


ದೇವರಾದ ಯೆಹೋವನು ಆ ಮನುಷ್ಯನಿಗೆ, “ತೋಟದಲ್ಲಿರುವ ಯಾವ ಮರದ ಹಣ್ಣನ್ನು ಬೇಕಾದರೂ ನೀನು ತಿನ್ನಬಹುದು.


ಅದರೆ ದೇವರು ತನ್ನ ಯೋಜನೆಗನುಸಾರವಾಗಿ ಅದಕ್ಕೆ ದೇಹವನ್ನು ಕೊಡುತ್ತಾನೆ ಮತ್ತು ದೇವರು ಪ್ರತಿಯೊಂದು ಬಗೆಯ ಬೀಜಕ್ಕೆ ಅದರದೇ ಆದ ದೇಹವನ್ನು ಕೊಡುತ್ತಾನೆ.


ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.


ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು