Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:21 - ಪರಿಶುದ್ದ ಬೈಬಲ್‌

21 ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ದೇವರು ಮಹಾಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ದೇವರು ದೊಡ್ಡ ಜಲಚರಗಳನ್ನು, ನೀರಿನಲ್ಲಿ ತುಂಬಿರುವ ಎಲ್ಲಾ ಚಲಿಸುವ ಜೀವ ಜಂತುಗಳನ್ನು, ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಯನ್ನು ಅವುಗಳ ಜಾತಿಗನುಸಾರವಾಗಿ ಸೃಷ್ಟಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:21
23 ತಿಳಿವುಗಳ ಹೋಲಿಕೆ  

ಹೀಗೆ ದೇವರು ಪ್ರತಿಯೊಂದು ಬಗೆಯ ಕಾಡುಪ್ರಾಣಿಗಳನ್ನು, ಸಾಕುಪ್ರಾಣಿಗಳನ್ನು ಮತ್ತು ಹರಿದಾಡುವ ಎಲ್ಲಾ ಕ್ರಿಮಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.


ಎಲ್ಲಾ ಪ್ರಾಣಿಗಳು, ಪಕ್ಷಿಗಳು, ಹರಿದಾಡುವ ಜೀವಿಗಳು ನಾವೆಯಿಂದ ಹೊರಬಂದವು.


ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು, ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚೆಚ್ಚಾಗಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು.


ನೈಲ್ ನದಿಯು ಕಪ್ಪೆಗಳಿಂದ ತುಂಬಿ ಹೋಗುವುದು. ಕಪ್ಪೆಗಳು ನದಿಯಿಂದ ಬಂದು ನಿಮ್ಮ ಮನೆಗಳನ್ನು ಪ್ರವೇಶಿಸುವವು; ನಿಮ್ಮ ಮಲಗುವ ಕೋಣೆಯಲ್ಲಿಯೂ ನಿಮ್ಮ ಹಾಸಿಗೆಗಳಲ್ಲಿಯೂ ನಿಮ್ಮ ಅಧಿಕಾರಿಗಳ ಮನೆಗಳಲ್ಲಿಯೂ ನಿಮ್ಮ ಒಲೆಗಳಲ್ಲಿಯೂ ನೀರಿನ ಜಾಡಿಗಳಲ್ಲಿಯೂ ಹಿಟ್ಟುನಾದುವ ತಟ್ಟೆಗಳಲ್ಲಿಯೂ ಇರುವವು;


ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.


“ನೋಹನೇ, ನಿನಗೂ ನಿನ್ನ ಮಕ್ಕಳಿಗೂ ಅನೇಕ ಮಕ್ಕಳು ಹುಟ್ಟಲಿ. ನೀವು ಅಭಿವೃದ್ಧಿಗೊಂಡು ಭೂಮಿಯಲ್ಲಿ ತುಂಬಿಕೊಳ್ಳಿರಿ” ಎಂದು ಹೇಳಿದನು.


ಅವರು ನಾವೆಯೊಳಗೆ ಇದ್ದರು. ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪ್ರಾಣಿಗಳು, ಪ್ರತಿಯೊಂದು ಬಗೆಯ ಪಶುಗಳು, ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಬಗೆಯ ಕ್ರಿಮಿಗಳು ಮತ್ತು ಪ್ರತಿಯೊಂದು ಬಗೆಯ ಪಕ್ಷಿಗಳು ನಾವೆಯೊಳಗೆ ಇದ್ದವು.


ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪಕ್ಷಿಗಳಲ್ಲಿ ಎರಡೆರಡೂ ಪ್ರತಿಯೊಂದು ಪ್ರಾಣಿಗಳಲ್ಲಿ ಎರಡೆರಡೂ ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಜಂತುಗಳಲ್ಲಿ ಎರಡೆರಡೂ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ನಿನ್ನೊಂದಿಗಿರಲಿ.


“ಸತ್ತವರ ಆತ್ಮಗಳು ಭೂಗರ್ಭದಲ್ಲಿರುವ ಜಲರಾಶಿಗಳಲ್ಲಿ ನಡುಗುತ್ತವೆ.


ದೇವರೇ, ನೀನು ನನ್ನನ್ನು ಕಾಯುವುದೇಕೆ? ನಾನೇನು ಸಮುದ್ರವೇ? ಭಯಂಕರವಾದ ಸಮುದ್ರ ಪ್ರಾಣಿಯೇ?


ದೇವರು ತಾನು ಸೃಷ್ಟಿಸಿದ್ದನ್ನೆಲ್ಲಾ ನೋಡಿದಾಗ, ಅವು ಆತನಿಗೆ ಒಳ್ಳೆಯದಾಗಿ ಕಂಡವು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಆರನೆ ದಿನವಾಯಿತು.


ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.


ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.


ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.


“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”


ಆಗ ಯೆಹೋವನು ಆ ಮೀನಿಗೆ ಆಜ್ಞಾಪಿಸಲು ಆ ಮೀನು ಯೋನನನ್ನು ಒಣನೆಲದಲ್ಲಿ ತನ್ನ ಹೊಟ್ಟೆಯೊಳಗಿಂದ ಕಾರಿಬಿಟ್ಟಿತು.


ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು.


ಇದಲ್ಲದೆ ದೇವರು, “ಜಲಚರಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಹೇಳಿ ಆಶೀರ್ವದಿಸಿದನು.


ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ.


ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ! ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ!


ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.


“ಆದರೆ ಪ್ರಾಣಿಗಳನ್ನು ಕೇಳು, ಅವು ನಿನಗೆ ಉಪದೇಶಿಸುತ್ತವೆ. ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು