Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:24 - ಪರಿಶುದ್ದ ಬೈಬಲ್‌

24 ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡ ಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕ ಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ದೇವರು - ಭೂವಿುಯಿಂದ ಜೀವಜಂತುಗಳು ಉಂಟಾಗಲಿ; ಪಶುಕ್ರಿವಿುಗಳೂ ಕಾಡುಮೃಗಗಳೂ ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ ಅಂದನು; ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಮೇಲೆ ದೇವರು, “ಭೂಮಿಯಿಂದ ಎಲ್ಲಾ ತರಹದ ಜೀವಿಗಳು ಉಂಟಾಗಲಿ: ಪಶುಗಳು, ನೆಲದ ಮೇಲೆ ಹರಿದಾಡುವ ಜೀವಿಗಳು, ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಉಂಟಾಗಲಿ,” ಎಂದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:24
15 ತಿಳಿವುಗಳ ಹೋಲಿಕೆ  

“ಯೋಬನೇ, ಬೆಹೇಮೋತನ್ನು ನೋಡು. ಅದನ್ನು ನಿರ್ಮಿಸಿದವನು ನಾನೇ; ನಿನ್ನನ್ನು ನಿರ್ಮಿಸಿದವನೂ ನಾನೇ. ಅದು ಹಸುವಿನಂತೆ ಹುಲ್ಲನ್ನು ಮೇಯುತ್ತದೆ.


ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪಕ್ಷಿಗಳಲ್ಲಿ ಎರಡೆರಡೂ ಪ್ರತಿಯೊಂದು ಪ್ರಾಣಿಗಳಲ್ಲಿ ಎರಡೆರಡೂ ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಜಂತುಗಳಲ್ಲಿ ಎರಡೆರಡೂ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ನಿನ್ನೊಂದಿಗಿರಲಿ.


ಎಲ್ಲಾ ಪ್ರಾಣಿಗಳು, ಪಕ್ಷಿಗಳು, ಹರಿದಾಡುವ ಜೀವಿಗಳು ನಾವೆಯಿಂದ ಹೊರಬಂದವು.


ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.


“ಯೋಬನೇ, ಸ್ವತಂತ್ರವಾಗಿರುವಂತೆ ಕಾಡುಕತ್ತೆಗಳನ್ನು ಕಳುಹಿಸಿದವರು ಯಾರು? ಅವುಗಳ ಹಗ್ಗಗಳನ್ನು ಬಿಚ್ಚಿ, ಅವುಗಳನ್ನು ಬಿಟ್ಟುಬಿಟ್ಟವರು ಯಾರು?


ಅವರು ನಾವೆಯೊಳಗೆ ಇದ್ದರು. ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪ್ರಾಣಿಗಳು, ಪ್ರತಿಯೊಂದು ಬಗೆಯ ಪಶುಗಳು, ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಬಗೆಯ ಕ್ರಿಮಿಗಳು ಮತ್ತು ಪ್ರತಿಯೊಂದು ಬಗೆಯ ಪಕ್ಷಿಗಳು ನಾವೆಯೊಳಗೆ ಇದ್ದವು.


ಬಳಿಕ ಜನರು ಕೆಲಸಕಾರ್ಯಗಳಿಗಾಗಿ ಹೊರಟು ಸಾಯಂಕಾಲದವರೆಗೂ ದುಡಿಯುವರು.


ಎತ್ತರವಾದ ಬೆಟ್ಟಗಳು ಕಾಡುಕುರಿಗಳಿಗೆ ವಾಸಸ್ಥಳವಾಗಿವೆ. ದೊಡ್ಡ ಬಂಡೆಗಳು ಬೆಟ್ಟದ ಮೊಲಗಳಿಗೆ ಆಶ್ರಯಸ್ಥಾನಗಳಾಗಿವೆ.


“ಯೋಬನೇ, ನೀನು ಕುದುರೆಗೆ ಶಕ್ತಿಯನ್ನು ಕೊಟ್ಟೆಯಾ? ಅದರ ಕೊರಳಿನ ಮೇಲಿನ ಕೇಸರವನ್ನು ಕೊಟ್ಟೆಯಾ?


“ಯೋಬನೇ, ಕಾಡುಕೋಣಕ್ಕೆ ಮೂಗುದಾರವನ್ನು ಕಟ್ಟಿ ನಿನ್ನ ಹೊಲವನ್ನು ಉಳುವಂತೆ ಮಾಡಬಲ್ಲೆಯಾ? ತಗ್ಗುಭೂಮಿಯಲ್ಲಿ ಕುಂಟೆ ಹೊಡೆಯಬಲ್ಲೆಯಾ?


“ಯೋಬನೇ, ಬೆಟ್ಟದ ಮೇಕೆಗಳು ಯಾವಾಗ ಹುಟ್ಟುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ತಾಯಿ ಜಿಂಕೆಯು ಮರಿ ಈಯುವಾಗ ನೀನು ಸಹಾಯ ಮಾಡಬಲ್ಲೆಯಾ?


ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಐದನೆ ದಿನವಾಯಿತು.


ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು