Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:26 - ಪರಿಶುದ್ದ ಬೈಬಲ್‌

26 ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಅವರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:26
34 ತಿಳಿವುಗಳ ಹೋಲಿಕೆ  

ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.


ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು.


ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.


ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.


ನಮ್ಮ ಪ್ರಭುವನ್ನು ಮತ್ತು ತಂದೆಯನ್ನು (ದೇವರು) ಸ್ತುತಿಸಲು ನಮ್ಮ ನಾಲಿಗೆಯನ್ನು ಬಳಸುತ್ತೇವೆ; ಆದರೆ ಅದರಿಂದಲೇ ಜನರನ್ನು ಶಪಿಸುತ್ತೇವೆ. ದೇವರು ಆ ಜನರನ್ನೂ ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿಸಿದ್ದಾನೆ.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ಆದರೆ ಪುರುಷನು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬಾರದು. ಏಕೆಂದರೆ, ಪುರುಷನು ದೇವರ ಸ್ವರೂಪವಾಗಿದ್ದಾನೆ ಮತ್ತು ದೇವರ ಪ್ರಭಾವವಾಗಿದ್ದಾನೆ. ಆದರೆ ಸ್ತ್ರೀಯು ಪುರುಷನ ಪ್ರಭಾವವಾಗಿದ್ದಾಳೆ.


“ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”


“ನಾನು ಮತ್ತೊಂದು ವಿಷಯವನ್ನು ತಿಳಿದುಕೊಂಡೆನು. ಅದೇನೆಂದರೆ, ದೇವರು ಮನುಷ್ಯರನ್ನು ನೀತಿವಂತರನ್ನಾಗಿ ಸೃಷ್ಟಿಸಿದನು. ಆದರೆ ಜನರು ಕೆಟ್ಟವರಾಗಿರಲು ಅನೇಕ ದಾರಿಗಳನ್ನು ಕಂಡುಕೊಂಡರು.”


ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.


ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.


ಆದ್ದರಿಂದ ಯೇಸುವಿನ ಬಗ್ಗೆ ನಮಗೆ ತಿಳಿಸಲು ಮೂರು ಸಾಕ್ಷಿಗಳಿವೆ:


ಜನರು ಎಲ್ಲಾ ವಿಧವಾದ ಕಾಡುಮೃಗ, ಪಕ್ಷಿ, ಸರ್ಪ, ಮೀನುಗಳನ್ನು ಹತೋಟಿಗೆ ತರುತ್ತಾರೆ. ಜನರು ಈಗಾಗಲೇ ಇವುಗಳನ್ನು ಹತೋಟಿಗೆ ತಂದಿದ್ದಾರೆ.


ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.


ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.


ಆದ್ದರಿಂದ ನಾವು ಕೆಳಗೆ ಹೋಗಿ ಅವರ ಭಾಷೆಯನ್ನು ತಾರುಮಾರು ಮಾಡೋಣ; ಆಗ ಅವರು ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದನು.


ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು.


ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ.


ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು.


ನೀನು ಹೇಳುತ್ತಿರುವ ಸಂಗತಿಗಳು ನಮಗೆ ಹೊಸದಾಗಿವೆ. ನಾವು ಹಿಂದೆಂದೂ ಈ ಸಂಗತಿಗಳನ್ನು ಕೇಳಿಲ್ಲ. ಈ ಉಪದೇಶದ ಅರ್ಥವನ್ನು ನಾವು ತಿಳಿದುಕೊಳ್ಳ ಬಯಸುತ್ತೇವೆ” ಎಂದು ಹೇಳಿದರು.


ನೀನು ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವೆ; ಕಾಡುಮೃಗಗಳೂ ನಿನ್ನೊಂದಿಗೆ ಸಮಾಧಾನದಿಂದಿರುತ್ತವೆ.


ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.


ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.


ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ?


ಬೆಳ್ಳಿಯ ತಿರುಪಿನಿಂದ ಕೂಡಿದ ಚಿನ್ನದ ಆಭರಣಗಳನ್ನು ನಾವು ನಿನಗೋಸ್ಕರ ಮಾಡಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು