ಆದಿಕಾಂಡ 1:27 - ಪರಿಶುದ್ದ ಬೈಬಲ್27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು; ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು; ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು. ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು. ಅಧ್ಯಾಯವನ್ನು ನೋಡಿ |
ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು.