Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:30 - ಪರಿಶುದ್ದ ಬೈಬಲ್‌

30 ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇದಲ್ಲದೆ ಭೂವಿುಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳು ಎಂಬ ಜೀವಿಗಳಿಗೆ ಎಲ್ಲಾ ಹುಲ್ಲುಸೊಪ್ಪುಗಳನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಎಂದು ಹೇಳಿದನು; ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಭೂಮಿಯಲ್ಲಿರುವ ಎಲ್ಲಾ ಜೀವಿಗಳಿಗೂ ಆಕಾಶದ ಪಕ್ಷಿಗಳಿಗೂ ನೆಲದ ಮೇಲೆ ಹರಿದಾಡುವ ಜೀವಿಗಳಿಗೂ ಉಸಿರನ್ನು ಹೊಂದಿರುವ ಪ್ರತಿಯೊಂದು ಜೀವಿಗಳಿಗೆ ಹಸಿರಾದ ಸಸ್ಯಗಳನ್ನೆಲ್ಲಾ ನಾನು ಆಹಾರವಾಗಿ ಕೊಟ್ಟಿದ್ದೇನೆ,” ಎಂದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:30
11 ತಿಳಿವುಗಳ ಹೋಲಿಕೆ  

ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ.


ದೇವರು ಪ್ರಾಣಿಗಳಿಗೂ ಪಕ್ಷಿಯ ಮರಿಗಳಿಗೂ ಆಹಾರ ಕೊಡುವನು.


ಕಾಡುಪ್ರಾಣಿಗಳು ಆಟವಾಡುವ ಬೆಟ್ಟಗಳ ಮೇಲೆ ಬೆಳೆಯುವ ಹುಲ್ಲನ್ನು ಅದು ತಿನ್ನುತ್ತದೆ.


“ಯೋಬನೇ, ಬೆಹೇಮೋತನ್ನು ನೋಡು. ಅದನ್ನು ನಿರ್ಮಿಸಿದವನು ನಾನೇ; ನಿನ್ನನ್ನು ನಿರ್ಮಿಸಿದವನೂ ನಾನೇ. ಅದು ಹಸುವಿನಂತೆ ಹುಲ್ಲನ್ನು ಮೇಯುತ್ತದೆ.


ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.


ಹದ್ದಿನ ಮರಿಗಳು ರಕ್ತವನ್ನು ಕುಡಿಯುತ್ತವೆ. ಅವು ಸತ್ತದೇಹಗಳ ಸುತ್ತಲೂ ಸೇರಿಕೊಳ್ಳುತ್ತವೆ.”


ಕಾಡುಕತ್ತೆಗಳು ಬೆಟ್ಟಗಳಲ್ಲಿ ವಾಸಿಸುತ್ತವೆ. ಹಸಿರಾದ ಏನನ್ನಾದರೂ ತಿನ್ನುವುದಕ್ಕೆ ಅವು ಅಲ್ಲಿಯೇ ಹುಡುಕುತ್ತವೆ.


ಬೆಟ್ಟದಮೇಕೆ ಮರಿಗಳೂ ಜಿಂಕೆಯ ಮರಿಗಳೂ ಬಯಲುಗಳಲ್ಲಿ ಪುಷ್ಟಿಯಾಗಿ ಬೆಳೆಯುತ್ತವೆ. ಬಳಿಕ ಅವು ತಮ್ಮ ತಾಯಂದಿರನ್ನು ಬಿಟ್ಟುಹೋಗುತ್ತವೆ; ಹಿಂತಿರುಗಿ ಬರುವುದೇ ಇಲ್ಲ.


ಭೂಮಿಯ ಮೇಲೆ ದೊರೆಯುವ ಎಲ್ಲಾ ಬಗೆಯ ಆಹಾರವನ್ನು ನಿಮಗಾಗಿಯೂ ಮತ್ತು ಪ್ರಾಣಿಗಳಿಗಾಗಿಯೂ ನಾವೆಯಲ್ಲಿ ತುಂಬಿಸಿಕೊ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು