Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:7 - ಪರಿಶುದ್ದ ಬೈಬಲ್‌

7 ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ವಿಸ್ತಾರವಾದ ಗುಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು; ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆ ದೇವರು ವಿಸ್ತಾರವಾದ ಗುಮ್ಮಟವನ್ನು ಅದರ ಕೆಳಗಿದ್ದ ನೀರನ್ನೂ ಅದರ ಮೇಲಿದ್ದ ನೀರನ್ನೂ ಪ್ರತ್ಯೇಕಿಸಿದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:7
15 ತಿಳಿವುಗಳ ಹೋಲಿಕೆ  

ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು! ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ!


ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.


ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.


ದೇವರು ಮೋಡಗಳನ್ನು ನೀರಿನಿಂದ ತುಂಬಿಸುವನು. ಆದರೆ ಮೋಡಗಳು ನೀರಿನ ಭಾರದಿಂದ ಒಡೆದುಹೋಗದಂತೆ ನೋಡಿಕೊಳ್ಳುವನು.


ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು.


ಮೋಡಗಳು ನೀರಿನಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತವೆ. ಮರವು ದಕ್ಷಿಣಕ್ಕಾಗಲಿ ಉತ್ತರಕ್ಕಾಗಲಿ ಬಿದ್ದರೆ, ಅದು ತಾನು ಬಿದ್ದಲ್ಲಿಯೇ ಇರುವುದು.


ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡ ಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕ ಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು.


ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.


ನೀನು ನೀರನ್ನು ಬುಗ್ಗೆಗಳಿಂದ ತೊರೆಗಳಿಗೆ ಹರಿಯಮಾಡುವೆ. ಬೆಟ್ಟದ ತೊರೆಗಳ ಮೂಲಕ ನೀರು ಹರಿದುಹೋಗುವುದು.


ದೇವರು ಆ ಗುಮಟಕ್ಕೆ ಆಕಾಶವೆಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಎರಡನೆ ದಿನವಾಯಿತು.


ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು. ಗಗನವು ಆತನ ಕೈಕೆಲಸವನ್ನು ತಿಳಿಸುವುದು.


ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು. ಪ್ರತಿಯೊಂದು ರಾತ್ರಿಯೂ ಅದರ ಕುರಿತು ಹೊಸ ಸಂಗತಿಯನ್ನು ಪ್ರಕಟಿಸುವುದು.


ಜ್ಞಾನದಿಂದ ಆಕಾಶವನ್ನು ನಿರ್ಮಿಸಿದ ಆತನೊಬ್ಬನನ್ನೇ ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು