ಆದಿಕಾಂಡ 1:9 - ಪರಿಶುದ್ದ ಬೈಬಲ್9 ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅನಂತರ ದೇವರು - ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣನೆಲವು ಕಾಣಿಸಲಿ ಅಂದನು; ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿ |
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.
ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.