ಆದಿಕಾಂಡ 10:10 - ಪರಿಶುದ್ದ ಬೈಬಲ್10 ನಿಮ್ರೋದನ ರಾಜ್ಯವು ಶಿನಾರ್ ದೇಶದಲ್ಲಿರುವ ಬಾಬಿಲೋನಿನಲ್ಲಿ, ಯೆರೆಕ್‌ನಲ್ಲಿ ಮತ್ತು ಅಕ್ಕದ್ ಮತ್ತು ಕಲ್ನೇ ಎಂಬ ಪಟ್ಟಣಗಳಲ್ಲಿ ಪ್ರಾರಂಭವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್ ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು. ಅಧ್ಯಾಯವನ್ನು ನೋಡಿ |
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”