Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:11 - ಪರಿಶುದ್ದ ಬೈಬಲ್‌

11-12 ನಿಮ್ರೋದನು ಅಶ್ಶೂರಕ್ಕೂ ಹೋದನು. ಅಶ್ಶೂರದಲ್ಲಿ ನಿನೆವೆ, ರೆಹೋಬೋತೀರ್, ಕೆಲಹ ಮತ್ತು ರೆಸೆನ್ ಎಂಬ ಪಟ್ಟಣಗಳನ್ನು ಕಟ್ಟಿದನು. ರೆಸೆನ್ ಪಟ್ಟಣವು ನಿನೆವೆಗೂ ದೊಡ್ಡಪಟ್ಟಣವಾದ ಕೆಲಹಕ್ಕೂ ಮಧ್ಯದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಆ ನಾಡಿನಿಂದ ಹೊರಟು ಅಸ್ಸೀರಿಯಾ ನಾಡಿಗೆ ಬಂದು ನಿನೆವೆ, ರಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ದೇಶದಿಂದ ಅವನು ಅಸ್ಸೀರಿಯಕ್ಕೆ ಹೋಗಿ ನಿನೆವೆ, ರೆಹೋಬೋತೀರ್, ಕೆಲಹ ಪಟ್ಟಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:11
17 ತಿಳಿವುಗಳ ಹೋಲಿಕೆ  

ಅವರು ತಮ್ಮ ಖಡ್ಗಗಳನ್ನು ಉಪಯೋಗಿಸಿ ಅಶ್ಶೂರದವರನ್ನು ಆಳುವರು. ಅವರು ನಿಮ್ರೋದನ ದೇಶವನ್ನು ಆಳುವರು. ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡು ಆ ಜನರನ್ನು ಆಳುವರು. ಆದರೆ ಇಸ್ರೇಲಿನ ರಾಜನು ಅಶ್ಶೂರದವರಿಂದ ನಮ್ಮನ್ನು ರಕ್ಷಿಸುವನು. ಅವರು ನಮ್ಮ ದೇಶದೊಳಕ್ಕೆ ಬಂದು ನಮ್ಮ ಪ್ರದೇಶವನ್ನು ತುಳಿದು ಹಾಳುಮಾಡುವಾಗ ನಾವು ರಕ್ಷಿಸಲ್ಪಡುವೆವು.


ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.


“ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”


ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.


ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.


ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಡುವರು. ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ ಎಂದು ಜನರು ಹೇಳುವರು. ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?”


ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


“ಅಶ್ಶೂರವೂ ಅದರ ಎಲ್ಲಾ ಸೈನ್ಯವೂ ಆ ಪಾತಾಳದಲ್ಲಿರುವದು. ಅವರ ಸ್ಥಳವು ಆಳವಾದ ಗುಂಡಿಯಲ್ಲಿರುವದು. ಆ ಅಶ್ಶೂರದ ಸೈನಿಕರೆಲ್ಲಾ ರಣರಂಗದಲ್ಲಿ ಮಡಿದವರೇ. ಅವರ ಸಮಾಧಿಗಳು ಅಶ್ಶೂರದ ಸಮಾಧಿಯ ಸುತ್ತಮುತ್ತ ಇವೆ. ಅವರು ಜೀವಂತರಾಗಿರುವಾಗ ಜನರನ್ನು ಭೀತಿಗೊಳಿಸುತ್ತಿದ್ದರು. ಆದರೆ ಈಗ ಮೌನವಾಗಿದ್ದಾರೆ. ಅವರೆಲ್ಲಾ ಯುದ್ಧದಲ್ಲಿ ಸತ್ತರು.


ಮತ್ತು ಹಾರಾನ್‌ಕನ್ನೆ, ಎದೆನ್, ಶೆಬದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಊರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು.


ಅಶ್ಶೂರದ ಅರಸನಾದ ಸನ್ಹೇರೀಬನು ನಿನೆವೆಗೆ ಹಿಂದಿರುಗಿ ಅಲ್ಲಿಯೇ ಉಳಿದನು.


ಆಗ ಅಶ್ಶೂರದ ರಾಜನಾದ ಸನ್ಹೇರೀಬನು ತಾನು ವಾಸಿಸುತ್ತಿದ್ದ ನಿನವೆಗೆ ಹಿಂದಿರುಗಿಹೋದನು.


ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”


ಆದರೆ ಕೇನ್ಯರೇ, ಅಶ್ಶೂರ್ಯವು ನಿಮ್ಮನ್ನು ಸೆರೆ ಒಯ್ಯುವಾಗ ಅದು ನಾಶವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು