Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:5 - ಪರಿಶುದ್ದ ಬೈಬಲ್‌

5 ತೀರ ಪ್ರದೇಶದ ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇಶಭಾಷಾ ಕುಲಜನಾಂಗಗಳ ಪ್ರಕಾರ [ಇವರೇ ಯೆಫೆತನ ವಂಶದವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವರಿಂದ ಕಡಲತೀರದ ಹಾಗೂ ದ್ವೀಪಗಳ ನಿವಾಸಿಯರು ತಮ್ಮ ಸ್ವಂತ ದೇಶ, ಭಾಷೆ, ಕುಲ ಜನಾಂಗಗಳ ಪ್ರಕಾರ ಹರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:5
26 ತಿಳಿವುಗಳ ಹೋಲಿಕೆ  

ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


ಸಮುದ್ರದ ಆಚೆಗಿದ್ದ ಕಿತ್ತೀಮ್ ದಿಬಪಗಳಿಗೆ ಹೋಗಿ ನೋಡಿರಿ. ಸೂಕ್ಷ್ಮವಾಗಿ ಪರಿಶೀಲಿಸಲು ಯಾರನ್ನಾದರೂ ಕೇದಾರಿಗೆ ಕಳುಹಿಸಿರಿ. ಯಾರಾದರೂ ಎಂದಾದರೂ ಇಂಥ ಕೆಲಸ ಮಾಡಿರುವರೇ, ನೋಡಿರಿ.


ತೂರಿನ ಮತ್ತು ಚೀದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಬಹಳ ದೂರದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ಅವರೆಲ್ಲರೂ ಹಾಮನ ಸಂತತಿಯವರು. ಆ ಕುಟುಂಬಗಳವರೆಲ್ಲರು ತಮ್ಮ ಸ್ವಂತ ಭಾಷೆಗಳನ್ನು ಮತ್ತು ತಮ್ಮ ಸ್ವಂತ ನಾಡುಗಳನ್ನು ಹೊಂದಿದ್ದರು. ಅವುಗಳೆಲ್ಲ ಪ್ರತ್ಯೇಕ ಜನಾಂಗಗಳಾದರು.


ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.


ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು. ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು.


ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರುನೋಡುತ್ತಿದ್ದಾರೆ.


ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.


ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರಮಾಡಲಿ.


ದೂರ ಸ್ಥಳಗಳವರೇ, ನೋಡಿರಿ, ಭಯಗೊಳ್ಳಿರಿ. ಭೂಮಿಯ ಕಟ್ಟಕಡೆಗಿರುವ ದೇಶಗಳೇ, ಭಯದಿಂದ ನಡುಗಿರಿ. ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿರಿ ಎಂದಾಗ ಅವರು ಬಂದರು.


ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ.


ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.


ತಾರ್ಷೀಷಿನ ರಾಜರುಗಳೂ ಬಹುದೂರದ ದೇಶಗಳವರೂ ಅವನಿಗೆ ಉಡುಗೊರೆಗಳನ್ನು ಕೊಡಲಿ. ಶೆಬಾ ಮತ್ತು ಸೆಬಾ ಪ್ರಾಂತ್ಯಗಳ ರಾಜರುಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಕೊಡಲಿ.


ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್.


ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಷೀಸ್, ಕಿತ್ತೀಮ್ ಮತ್ತು ದೋದಾನೀಮ್.


ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.


ಒಡೆಯನಾದ ಯೆಹೋವನು ತೂರಿಗೆ ಹೇಳುವುದೇನೆಂದರೆ, “ಭೂಮದ್ಯ ಸಮುದ್ರ ಕರಾವಳಿಯಲ್ಲಿರುವ ದೇಶದವರು ನೀನು ಕೆಳಗೆ ಬೀಳುವ ಶಬ್ದ ಕೇಳಿ ನಡುಗುವರು. ಅದು ನಿನ್ನ ಜನರು ಗಾಯಗೊಂಡು ಸಾಯುವಾಗ ಆಗುವದು.


ನೀನು ಬಿದ್ದ ದಿವಸ ಕರಾವಳಿಯಲ್ಲಿರುವ ದೇಶಗಳೆಲ್ಲಾ ನಡುಗುವವು. ನೀನು ಕರಾವಳಿಯಲ್ಲಿ ಅನೇಕ ವಸಾಹತುಗಳನ್ನು ನಿರ್ಮಿಸಿದ್ದೀ. ನೀನು ಹೋದ ಬಳಿಕ ಅವರು ಭಯಗ್ರಸ್ತರಾಗುವರು.’”


“ಆಮೇಲೆ ಉತ್ತರದ ರಾಜನು ಭೂಮಧ್ಯ ಸಾಗರದ ಕರಾವಳಿಯ ದೇಶಗಳ ಕಡೆಗೆ ಗಮನಹರಿಸುವನು. ಅವನು ಅನೇಕ ನಗರಗಳನ್ನು ಗೆಲ್ಲುವನು. ಆದರೆ ಆಗ ಒಬ್ಬ ಸೇನಾಧಿಪತಿಯು ಉತ್ತರದ ರಾಜನ ಅಹಂಕಾರವನ್ನೂ ಸೊಕ್ಕನ್ನೂ ಮುರಿದುಬಿಡುವನು; ಅವನಿಗೆ ಅವಮಾನ ಮಾಡುವನು.


ಈ ಮೂವರು ನೋಹನ ಗಂಡುಮಕ್ಕಳು. ಭೂಮಿಯ ಮೇಲಿರುವ ಜನರೆಲ್ಲರಿಗೂ ಇವರೇ ಮೂಲಪುರುಷರು.


ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ.


ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.


ಅಹಷ್ವೇರೋಷ್ ರಾಜನು ತನ್ನ ಪ್ರಜೆಗಳಿಂದ ತೆರಿಗೆಯನ್ನು ಎತ್ತಿದನು. ಅವನ ಸಾಮ್ರಾಜ್ಯದ ಪ್ರಜೆಗಳೆಲ್ಲರೂ ಹಾಗೂ ದೂರದ ಕರಾವಳಿಯ ನಗರವಾಸಿಗಳೂ, ತೆರಿಗೆಯನ್ನು ಕಟ್ಟಬೇಕಾಯಿತು.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು