Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:6 - ಪರಿಶುದ್ದ ಬೈಬಲ್‌

6 ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹಾಮನ ಮಕ್ಕಳು ಯಾರೆಂದರೆ - ಕೂಷ್, ಈಜಿಪ್ಟ್ (ಮಿಚ್ರಯಿಮ್) ಲಿಬಿಯಾ (ಪೂತ್) ಮತ್ತು ಕಾನಾನ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹಾಮನ ಸಂತಾನದವರು ಯಾರಂದರೆ - ಕೂಷ್, ವಿುಚ್ರಯಿಮ್, ಪೂತ್, ಕಾನಾನ್ ಎಂಬವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:6
15 ತಿಳಿವುಗಳ ಹೋಲಿಕೆ  

“‘ಪರ್ಶಿಯ, ಲೂದ್ ಮತ್ತು ಪೂಟ್‌ನ ಜನರು ನಿನ್ನ ಸೈನ್ಯದಲ್ಲಿರುವರು. ಅವರು ಯುದ್ಧವೀರರು. ಅವರು ನಿನ್ನ ಗೋಡೆಗಳಲ್ಲಿ ತಮ್ಮ ಗುರಾಣಿ ಮತ್ತು ಶಿರಸ್ತ್ರಾಣಗಳನ್ನು ತೂಗು ಹಾಕಿದರು. ನಿನ್ನ ನಗರಕ್ಕೆ ಘನತೆಯನ್ನು ಅವರು ತಂದರು.


ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ, ನಿಮ್ಮ ಗುರಾಣಿಗಳನ್ನು ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು. ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು!


ಹಾಮನ ದೇಶದಲ್ಲಿ ದೇವರು ಅನೇಕ ಮಹತ್ಕಾರ್ಯಗಳನ್ನು ಮೋಶೆ ಆರೋನರ ಮೂಲಕವಾಗಿ ಮಾಡಿದನು.


ಬಳಿಕ ಇಸ್ರೇಲನು ಈಜಿಪ್ಟಿಗೆ ಬಂದನು. ಯಾಕೋಬನು ಹಾಮನ ದೇಶದಲ್ಲಿ ವಾಸಿಸಿದನು.


ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು.


ಅಲ್ಲಿ ಫಲವತ್ತಾದ ಭೂಮಿಯನ್ನೂ ಹಸಿರು ಹುಲ್ಲುಗಾವಲನ್ನೂ ಕಂಡು ಅಲ್ಲಿಯೇ ನೆಲೆಸಿದರು. ಆ ಪ್ರದೇಶವು ಪ್ರಶಾಂತವಾಗಿತ್ತು. ಹಿಂದಿನ ಕಾಲದಲ್ಲಿ ಹಾಮನ ಸಂತತಿಯವರು ಅಲ್ಲಿ ನೆಲೆಸಿದ್ದರು.


ಕಾನಾನನ ತಂದೆಯಾದ ಹಾಮನು ತನ್ನ ತಂದೆ ಬೆತ್ತಲೆಯಾಗಿ ಮಲಗಿರುವುದನ್ನು ಕಂಡು ಈ ವಿಷಯವನ್ನು ಗುಡಾರದ ಹೊರಗಿದ್ದ ತನ್ನ ಸಹೋದರರಿಗೆ ತಿಳಿಸಿದನು.


ನೋಹನ ಗಂಡುಮಕ್ಕಳು ನೋಹನೊಡನೆ ನಾವೆಯೊಳಗಿಂದ ಹೊರಬಂದರು. ಅವರ ಹೆಸರುಗಳು: ಶೇಮ್, ಹಾಮ್ ಮತ್ತು ಯೆಫೆತ್ (ಹಾಮನು ಕಾನಾನನ ತಂದೆ.)


ತೀರ ಪ್ರದೇಶದ ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.


ಪರ್ಶಿಯ, ಇಥಿಯೋಪ್ಯ ಮತ್ತು ಪೂಟ್ ದೇಶಗಳ ಸೈನಿಕರು ಆ ಸೈನ್ಯದಲ್ಲಿರುವರು. ಅವರೆಲ್ಲರೂ ತಮ್ಮ ಆಯುಧಗಳನ್ನು ಧರಿಸಿಕೊಂಡಿರುವರು.


ಎರಡನೆ ನದಿಯ ಹೆಸರು ಗೀಹೋನ್. ಇಥಿಯೋಪಿಯ ದೇಶದಲ್ಲೆಲ್ಲಾ ಹರಿಯುತ್ತಿದ್ದ ನದಿ ಇದೇ.


ನೋಹನು 500 ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂವರು ಗಂಡುಮಕ್ಕಳನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು