ಆದಿಕಾಂಡ 10:9 - ಪರಿಶುದ್ದ ಬೈಬಲ್9 ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವರ ದೃಷ್ಟಿಯಲ್ಲಿ ದಿಟ್ಟ ಬೇಟೆಗಾರ. "ಪ್ರಭು ನಿನ್ನನ್ನು ನಿಮ್ರೋದನಂಥ ದಿಟ್ಟಬೇಟೆಗಾರನಾಗಿಸಲಿ" ಎಂಬ ನಾಣ್ನುಡಿ ಇಂದಿಗೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ಅತಿ ಸಾಹಸಿಯಾದ ಬೇಟೆಗಾರನು. ನಿಮ್ರೋದನಂತೆ ಅತಿ ಸಾಹಸಿಯಾದ ಬೇಟೆಗಾರನೆಂದು ಈಗಲೂ ಹೇಳುವದುಂಟಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ.
ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.