ಆದಿಕಾಂಡ 11:27 - ಪರಿಶುದ್ದ ಬೈಬಲ್27 ಇದು ತೆರಹನ ಕುಟುಂಬ ಚರಿತ್ರೆ. ತೆರಹನು ಅಬ್ರಾಮ, ನಾಹೋರ ಮತ್ತು ಹಾರಾನ ಎಂಬವರ ತಂದೆ. ಹಾರಾನನು ಲೋಟನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ತೆರಹನ ವಂಶವೃಕ್ಷ: ತೆರಹನಿಗೆ ಅಬ್ರಾಮ, ನಾಹೋರ, ಹಾರಾನ ಇವರು ಹುಟ್ಟಿದರು. ಹಾರಾನನಿಗೆ ಲೋಟನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತೆರಹನ ವಂಶದವರ ಚರಿತ್ರೆ. ತೆರಹನು ಅಬ್ರಾಮ ನಾಹೋರ ಹಾರಾನರನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ತೆರಹನ ವಂಶಾವಳಿ: ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು. ಅಧ್ಯಾಯವನ್ನು ನೋಡಿ |
ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.
ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.