Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:29 - ಪರಿಶುದ್ದ ಬೈಬಲ್‌

29 ಅಬ್ರಾಮ ಮತ್ತು ನಾಹೋರ ಮದುವೆ ಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು. ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾ ಮತ್ತು ಇಸ್ಕ ಎಂಬವರ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಬ್ರಾಮನು ಮತ್ತು ನಾಹೋರನು ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆ ಹಾರಾನನ ಮಗಳು; ಹಾರಾನನು ಮಿಲ್ಕಳಿಗು ಹಾಗೂ ಇಸ್ಕಳಿಗು ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ವಿುಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ವಿುಲ್ಕಳಿಗೂ ಇಸ್ಕಳಿಗೂ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾಳಿಗೂ ಇಸ್ಕಳಿಗೂ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:29
7 ತಿಳಿವುಗಳ ಹೋಲಿಕೆ  

ಈ ಸಂಗತಿಗಳೆಲ್ಲ ನಡೆದ ಮೇಲೆ ಅಬ್ರಹಾಮನಿಗೆ ಒಂದು ಸಂದೇಶ ಬಂದಿತು. ಆ ಸಂದೇಶವು ಹೀಗಿತ್ತು: “ನಿನ್ನ ತಮ್ಮನಾದ ನಾಹೋರ ಮತ್ತು ಅವನ ಹೆಂಡತಿಯಾದ ಮಿಲ್ಕ ಈಗ ಮಕ್ಕಳನ್ನು ಹೊಂದಿದ್ದಾರೆ.


ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರ.


ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.


ಆಕೆ ನನ್ನ ಹೆಂಡತಿಯೇನೋ ನಿಜ, ಆದರೆ ಆಕೆ ನನಗೆ ತಂಗಿಯೂ ಆಗಬೇಕು. ಆಕೆ ನನ್ನ ತಂದೆಯ ಮಗಳು; ನನ್ನ ತಾಯಿಯ ಮಗಳಲ್ಲ.


ಬೆತೂವೇಲನು ರೆಬೆಕ್ಕಳ ತಂದೆ. ಮಿಲ್ಕಳು ಈ ಎಂಟು ಮಕ್ಕಳ ತಾಯಿ; ನಾಹೋರನು ಅವರ ತಂದೆ. ನಾಹೋರನು ಅಬ್ರಹಾಮನ ಸಹೋದರ.


ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.


ರೆಬೆಕ್ಕಳು ಅವನಿಗೆ, “ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು