ಆದಿಕಾಂಡ 11:31 - ಪರಿಶುದ್ದ ಬೈಬಲ್31 ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನಗೆ ಮೊಮ್ಮಗನೂ ಹಾರಾನನಿಗೂ ಮಗನೂ ಆಗಿರುವ ಲೋಟನನ್ನೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರಕೊಂಡು ಕಾನಾನ್‍ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟನು. ಅವರು ಹಾರಾನ್ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿ |
ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.