ಆದಿಕಾಂಡ 12:3 - ಪರಿಶುದ್ದ ಬೈಬಲ್3 ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 "ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.” ಅಧ್ಯಾಯವನ್ನು ನೋಡಿ |
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.