Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:5 - ಪರಿಶುದ್ದ ಬೈಬಲ್‌

5 ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತಾನೂ ಲೋಟನೂ ಖಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ ದಾಸದಾಸಿಯರನ್ನೂ ತೆಗೆದುಕೊಂಡು ಹೋಗಿ ಕಾನಾನ್ ದೇಶಕ್ಕೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:5
13 ತಿಳಿವುಗಳ ಹೋಲಿಕೆ  

ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.


ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು.


“ಆದ್ದರಿಂದ ಅಬ್ರಹಾಮನು ಖಾಲ್ದೆಯ ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು.


ಬಳಿಕ ಸೊದೋಮಿನ ರಾಜನು ಅಬ್ರಾಮನಿಗೆ, “ಈ ವಸ್ತುಗಳನ್ನೆಲ್ಲ ನೀನೇ ಇಟ್ಟುಕೊ. ಶತ್ರುಗಳು ವಶಪಡಿಸಿಕೊಂಡಿರುವ ನನ್ನ ಜನರನ್ನು ಮಾತ್ರ ನನಗೆ ಕೊಡು” ಎಂದು ಹೇಳಿದನು.


ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.


ಈ ಕಾಲದಲ್ಲಿ ಲೋಟನು ಸಹ ಅಬ್ರಾಮನೊಡನೆ ಪ್ರಯಾಣಮಾಡುತ್ತಿದ್ದನು. ಲೋಟನಿಗೂ ಸಹ ಕುರಿಮಂದೆಗಳೂ ಪಶುಹಿಂಡುಗಳೂ ಗುಡಾರಗಳೂ ಇದ್ದವು.


ಅಬ್ರಾಮನಿಗೂ ಲೋಟನಿಗೂ ಬಹಳ ಪಶುಗಳಿದ್ದುದರಿಂದ ಅವುಗಳ ಪೋಷಣೆಗೆ ಆ ಸ್ಥಳವು ಸಾಕಾಗಲಿಲ್ಲ.


ಯಾಕೋಬನು ಬೇರ್ಷೆಬವನ್ನು ಬಿಟ್ಟು ಹಾರಾನಿಗೆ ಹೋದನು.


ಯಾಕೋಬ ಮತ್ತು ಏಸಾವರ ಕುಟುಂಬಗಳು ಬಹಳ ವೃದ್ಧಿಯಾದ ಕಾರಣ ಕಾನಾನ್ ದೇಶವು ಅವರಿಗೆ ಸಾಕಾಗಲಿಲ್ಲ. ಆದ್ದರಿಂದ ಏಸಾವನು ತನ್ನ ತಮ್ಮನಾದ ಯಾಕೋಬನಿಂದ ದೂರ ಹೋದನು. ಏಸಾವನು ತನ್ನ ಹೆಂಡತಿಯರನ್ನೂ ಗಂಡುಹೆಣ್ಣುಮಕ್ಕಳನ್ನೂ ಎಲ್ಲಾ ಸೇವಕರನ್ನೂ ದನಗಳನ್ನೂ ಮತ್ತು ಇತರ ಪಶುಗಳನ್ನೂ ತನಗೆ ಕಾನಾನಿನಲ್ಲಿದ್ದ ಪ್ರತಿಯೊಂದು ಆಸ್ತಿಯನ್ನೂ ತೆಗೆದುಕೊಂಡು ಸೇಯೀರ್ ಬೆಟ್ಟದ ಸೀಮೆಗೆ ಹೋದನು. (ಏಸಾವನಿಗೆ ಎದೋಮ್ ಎಂಬ ಹೆಸರೂ ಇದೆ. ಎದೋಮ್ ಎಂಬುದು ಸೇಯೀರ್ ದೇಶದ ಮತ್ತೊಂದು ಹೆಸರು.)


ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.


ಇದು ತೆರಹನ ಕುಟುಂಬ ಚರಿತ್ರೆ. ತೆರಹನು ಅಬ್ರಾಮ, ನಾಹೋರ ಮತ್ತು ಹಾರಾನ ಎಂಬವರ ತಂದೆ. ಹಾರಾನನು ಲೋಟನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು