ಆದಿಕಾಂಡ 12:7 - ಪರಿಶುದ್ದ ಬೈಬಲ್7 ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು. ಅಧ್ಯಾಯವನ್ನು ನೋಡಿ |
‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.
ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.