Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:9 - ಪರಿಶುದ್ದ ಬೈಬಲ್‌

9 ತರುವಾಯ ಅವನು ಮತ್ತೆ ಪ್ರಯಾಣವನ್ನು ಮುಂದುವರಿಸಿ ನೆಗೆವ್ ಸ್ಥಳದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತರುವಾಯ ಅಲ್ಲಿಂದ ಮುಂದ ಮುಂದಕ್ಕೆ ಸಾಗುತ್ತಾ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್‍ದೇಶದ ದಕ್ಷಿಣಸೀಮೆಗೆ ಮುಂದೆ ಮುಂದೆ ಹೋಗುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:9
10 ತಿಳಿವುಗಳ ಹೋಲಿಕೆ  

ಅಬ್ರಾಮನು ತನ್ನ ಪ್ರಯಾಣವನ್ನು ಮುಂದುವರಿಸಿ ನೆಗೆವ್‌ವನ್ನು ಬಿಟ್ಟು ಬೇತೇಲಿಗೆ ಹಿಂತಿರುಗಿಹೋದನು. ಅವನು ಬೇತೇಲ್‌ ನಗರಕ್ಕೂ ಆಯಿ ನಗರಕ್ಕೂ ಮಧ್ಯದಲ್ಲಿರುವ ಸ್ಥಳಕ್ಕೆ ಹೋದನು. ಅಬ್ರಾಮನು ಮತ್ತು ಅವನ ಕುಟುಂಬದವರು ಇಳಿದುಕೊಂಡಿದ್ದ ಸ್ಥಳವೇ ಇದು.


ಆ ಸಮಯದಲ್ಲಿ, ಇಸಾಕನು ಬೀರ್‌ಲಹೈರೋಯಿಗೆ ಹೋಗಿ ಬಂದಿದ್ದನು; ಯಾಕೆಂದರೆ ಅವನು ನೆಗವ್‌ನಲ್ಲಿ ವಾಸವಾಗಿದ್ದನು.


ಅಬ್ರಾಮನು ಈಜಿಪ್ಟಿನಿಂದ ಹೊರಟನು. ಅಬ್ರಾಮನು ತನ್ನ ಹೆಂಡತಿಯನ್ನು ಕರೆದುಕೊಂಡು ತನ್ನವುಗಳನ್ನೆಲ್ಲಾ ತೆಗೆದುಕೊಂಡು ನೆಗೆವ್ ಮೂಲಕ ಪ್ರಯಾಣ ಮಾಡಿದನು. ಲೋಟನು ಸಹ ಅವರೊಡನೆ ಇದ್ದನು.


ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಪ್ರಯಾಣ ಮಾಡಿದರು.


ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್‌ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು.


ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ


ಅಮೋರಿಯರು ವಾಸಿಸುವ ಬೆಟ್ಟಪ್ರಾಂತ್ಯಗಳಿಗೆ ಹೋಗಿರಿ, ಅದರ ಸುತ್ತಲೂ ಇರುವ ಜೋರ್ಡನಿನ ಬಯಲು ಪ್ರದೇಶಕ್ಕೆ, ಬೆಟ್ಟಪ್ರದೇಶಕ್ಕೆ, ಪಶ್ಚಿಮದ ಇಳಕಲುಪ್ರದೇಶಕ್ಕೆ, ನೆಗೆವ್ ಮತ್ತು ಸಮುದ್ರ ಕರಾವಳಿ ಪ್ರದೇಶಗಳಿಗೆ ಹೋಗಿರಿ. ಕಾನಾನ್ ಮತ್ತು ಲೆಬನೋನ್ ಪ್ರದೇಶಗಳ ಮೂಲಕ ಯೂಫ್ರೇಟೀಸ್ ಮಹಾನದಿಯವರೆಗೂ ಹೋಗಿರಿ.


ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.


ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು’” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು