ಆದಿಕಾಂಡ 13:10 - ಪರಿಶುದ್ದ ಬೈಬಲ್10 ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ಈ ವಸ್ತುಗಳನ್ನು ಮಾಡಲು ಉಪಯೋಗಿಸಿದ ಹಿತ್ತಾಳೆಯನ್ನು ಸೊಲೊಮೋನನು ತೂಕಹಾಕಲೇ ಇಲ್ಲ. ಯಾಕೆಂದರೆ ತೂಕ ಮಾಡಲಾಗದಷ್ಟು ವಸ್ತುಗಳು ಅಲ್ಲಿದ್ದವು. ಆದ್ದರಿಂದ ಹಿತ್ತಾಳೆಯ ಒಟ್ಟು ತೂಕವು ತಿಳಿಯಲೇ ಇಲ್ಲ. ಈ ವಸ್ತುಗಳನ್ನು ಸುಕ್ಕೋತ್ ಮತ್ತು ಚಾರೆತಾನ್‌ಗಳ ನಡುವೆ ಜೋರ್ಡನ್ ನದಿಯ ಹತ್ತಿರ ತಯಾರಿಸಲು ರಾಜನು ಆಜ್ಞಾಪಿಸಿದನು. ಅವರು ಹಿತ್ತಾಳೆಯನ್ನು ಕರಗಿಸಿ, ಅದನ್ನು ಮಣ್ಣಿನ ನೆಲದ ಅಚ್ಚುಗಳಲ್ಲಿ ಸುರಿದು ಈ ವಸ್ತುಗಳನ್ನು ಮಾಡಿದರು.
ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.