Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:13 - ಪರಿಶುದ್ದ ಬೈಬಲ್‌

13 ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:13
27 ತಿಳಿವುಗಳ ಹೋಲಿಕೆ  

ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ಆ ದೇವದೂತರಂತಾದವು. ಆ ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ.


ಅದೇರೀತಿಯಲ್ಲಿ, ಪುರುಷರು ಸ್ತ್ರೀಯರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ ಉದ್ರೇಕಗೊಂಡ ಸಲಿಂಗಕಾಮಿಗಳಾದರು. ಅವರು ತಮ್ಮ ದುರ್ನಡತೆಗೆ ತಕ್ಕ ದಂಡನೆಯನ್ನು ತಮ್ಮ ದೇಹಗಳಿಗೆ ಬರಮಾಡಿಕೊಂಡರು.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ಇದಲ್ಲದೆ ಯೆಹೋವನು, “ಸೊದೋಮ್ ಮತ್ತು ಗೊಮೋರಗಳ ಜನರು ಬಹಳ ಕೆಟ್ಟವರೆಂದು ಅನೇಕ ಸಲ ಕೇಳಿದ್ದೇನೆ.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.


ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತುಕೊಂಡನು. ಅನೇಕ ಮಂದಿ ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಸಹ ಯೇಸುವಿನ ಸಂಗಡ ಮತ್ತು ಆತನ ಹಿಂಬಾಲಕರ ಸಂಗಡ ಊಟಕ್ಕೆ ಕುಳಿತುಕೊಂಡರು.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಆತನು ನಿನಗೆ, ‘ಹೋಗು ದುಷ್ಟರಾದ ಅಮಾಲೇಕ್ಯರ ಮೇಲೆ ಯುದ್ಧ ಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಗೊಳಿಸು’ ಎಂದು ಆಜ್ಞಾಪಿಸಿದರು.


ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.


ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.


ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.


ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು.


ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.


ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.


ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.


ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.


ಯೆಹೋವನಿಗೆ ಅರ್ಪಿಸುವ ಯಜ್ಞವನ್ನು ಹೊಫ್ನಿ ಮತ್ತು ಫೀನೆಹಾಸರು ತುಚ್ಛೀಕರಿಸುತ್ತಿದ್ದರು. ಇದು ಯೆಹೋವನಿಗೆ ವಿರೋಧವಾದ ಮಹಾ ಪಾಪವಾಗಿತ್ತು.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು