Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:15 - ಪರಿಶುದ್ದ ಬೈಬಲ್‌

15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:15
31 ತಿಳಿವುಗಳ ಹೋಲಿಕೆ  

ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು ಕೊಟ್ಟೆನು. ಈಗ ನಾನು ಆ ದೇಶವನ್ನು ನಿನಗೆ ಕೊಡುವೆನು. ನಾನು ಆ ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)


ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀತಿವಂತರು ಪಡೆದುಕೊಂಡು ಅಲ್ಲಿ ಸದಾಕಾಲ ವಾಸಿಸುವರು.


ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.


ದೀನರು ಧನ್ಯರು. ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು.


“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನೀವು ಕಾನಾನ್ ದೇಶವನ್ನು ಪ್ರವೇಶಿಸಿದಾಗ, ಇಡೀ ಕಾನಾನ್ ದೇಶವನ್ನು ಅದರ ಗಡಿಗಳೊಡನೆ ನಿಮಗೆ ಸ್ವಾಸ್ತ್ಯವಾಗಿ ಕೊಡಲಾಗುವುದು.


ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ.


ದೇವರು ನನಗೆ, ‘ನಾನು ನಿನಗೆ ಅನೇಕ ಮಕ್ಕಳನ್ನು ಕೊಡುತ್ತೇನೆ; ನಿನ್ನ ಸಂತತಿಯವರು ಅನೇಕ ಜನಾಂಗಗಳಾಗುವರು; ನಿನ್ನ ಸಂತತಿಯವರಿಗೆ ನಾನು ಈ ದೇಶವನ್ನು ಶಾಶ್ವತವಾಗಿ ಕೊಡುವೆನು’ ಎಂದು ಹೇಳಿದನು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.


ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.


ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”


ಅಬ್ರಹಾಮನಿಂದ ಬಲಿಷ್ಠವಾದ ಮಹಾಜನಾಂಗ ಹುಟ್ಟುವುದು; ಅವನ ಮೂಲಕ ಈ ಲೋಕದ ಜನರೆಲ್ಲರೂ ಆಶೀರ್ವಾದ ಹೊಂದುವರು.


ಆದ್ದರಿಂದ ಹೋಗು, ನಿನ್ನ ಭೂಮಿಯಲ್ಲೆಲ್ಲಾ ತಿರುಗಾಡು. ಅದರ ಉದ್ದಗಲಗಳಲ್ಲೆಲ್ಲಾ ತಿರುಗಾಡು; ಯಾಕೆಂದರೆ ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.


ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.


ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.


ಯೆಹೋವನು ಇಸ್ರೇಲರಿಗೆ, “ನಾನು ನಿಮಗೆ ಕಾನಾನ್ ದೇಶವನ್ನು ಕೊಡುವೆನು. ಆ ವಾಗ್ದತ್ತ ದೇಶವು ನಿಮ್ಮದಾಗುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು