Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:16 - ಪರಿಶುದ್ದ ಬೈಬಲ್‌

16 ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:16
38 ತಿಳಿವುಗಳ ಹೋಲಿಕೆ  

ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು; ಇಸ್ರೇಲರ ಕಾಲು ಭಾಗವನ್ನಾದರೂ ಯಾರೂ ಲೆಕ್ಕಿಸಲಾರರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಲು ಬಯಸುವೆ. ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.”


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


‘ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು’ ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು.


ನಿನ್ನ ಸೇವಕನಾದ ನಾನು, ನೀನೇ ಆರಿಸಿಕೊಂಡಿರುವ ಜನರ ನಡುವೆ ಇದ್ದೇನೆ. ಇಲ್ಲಿ ಅನೇಕಾನೇಕ ಜನರಿದ್ದಾರೆ. ಅವರನ್ನು ಎಣಿಸಲಾಗದು, ಒಬ್ಬ ಆಡಳಿತಗಾರನು ಅವರ ಮಧ್ಯದಲ್ಲಿದ್ದು ಅನೇಕ ತೀರ್ಪುಗಳನ್ನು ಮಾಡಬೇಕಾಗುತ್ತದೆ.


ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”


ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದ್ದರಿಂದ ದಾವೀದನು ಇಪ್ಪತ್ತು ವರ್ಷ ಪ್ರಾಯದ ಮೇಲ್ಪಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು.


ಅರಸನಿಗೆ ಜನಗಣತಿಯ ಲೆಕ್ಕ ಒಪ್ಪಿಸಿದನು. ಇಸ್ರೇಲಿನಲ್ಲಿ ಒಟ್ಟು ಹನ್ನೊಂದು ಲಕ್ಷ ಮಂದಿ ಖಡ್ಗ ಉಪಯೋಗಿಸುವವರು ಇದ್ದರು. ಯೆಹೂದದಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಖಡ್ಗ ಉಪಯೋಗಿಸುವವರಿದ್ದರು.


ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.


ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು.


ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು.


ಈಗ ನಿಮ್ಮ ಜನಸಂಖ್ಯೆಯು ಇನ್ನೂ ಅಧಿಕವಾಗಿರುತ್ತದೆ. ದೇವರಾದ ಯೆಹೋವನು ನಿಮ್ಮನ್ನು ವೃದ್ಧಿಪಡಿಸುತ್ತಿರುವುದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಇರುವಿರಿ.


ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.


ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.


ಅಬ್ರಹಾಮನಿಂದ ಬಲಿಷ್ಠವಾದ ಮಹಾಜನಾಂಗ ಹುಟ್ಟುವುದು; ಅವನ ಮೂಲಕ ಈ ಲೋಕದ ಜನರೆಲ್ಲರೂ ಆಶೀರ್ವಾದ ಹೊಂದುವರು.


“ನೀನು ಇಷ್ಮಾಯೇಲನ ಬಗ್ಗೆ ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.


ಹೊಸ ಜನಾಂಗಗಳು ನಿನ್ನಿಂದ ಹುಟ್ಟುವವು; ರಾಜರುಗಳು ನಿನ್ನಿಂದ ಬರುವರು.


ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು.


ಇದಲ್ಲದೆ ಯೆಹೋವನ ದೂತನು ಹಾಗರಳಿಗೆ, “ನಾನು ನಿನ್ನ ಸಂತತಿಯವರನ್ನು ಅಸಂಖ್ಯಾತರನ್ನಾಗಿ ಮಾಡುವೆನು” ಅಂದನು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವುದಾಗಿ ವಾಗ್ದಾನ ಮಾಡುತ್ತೇನೆ” ಎಂದು ಹೇಳಿದನು.


ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.


ದೇವರಾದ ಯೆಹೋವನೇ ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿರುವ ವಾಗ್ದಾನವನ್ನು ನೆರವೇರಿಸು. ಒಂದು ದೊಡ್ಡ ರಾಜ್ಯಕ್ಕೆ ನನ್ನನ್ನು ಅರಸನನ್ನಾಗಿ ನೇಮಿಸಿರುತ್ತೀ. ಅದರಲ್ಲಿ ಭೂಮಿಯ ಧೂಳಿನೋಪಾದಿಯಲ್ಲಿ ಜನರು ತುಂಬಿದ್ದಾರೆ.


ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು.


ನೀನು ಅನೇಕ ಮಕ್ಕಳನ್ನು ಪಡೆದುಕೊಳ್ಳುವೆ. ಅವರು ಭೂಮಿಯ ಮೇಲಿರುವ ಹುಲ್ಲಿನ ಗರಿಗಳಷ್ಟಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು