ಆದಿಕಾಂಡ 13:6 - ಪರಿಶುದ್ದ ಬೈಬಲ್6 ಅಬ್ರಾಮನಿಗೂ ಲೋಟನಿಗೂ ಬಹಳ ಪಶುಗಳಿದ್ದುದರಿಂದ ಅವುಗಳ ಪೋಷಣೆಗೆ ಆ ಸ್ಥಳವು ಸಾಕಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈ ಕಾರಣ ಅವರಿಬ್ಬರ ಜೀವನಕ್ಕೆ ಅಲ್ಲಿ ಸ್ಥಳ ಸಾಲದೆಹೋಯಿತು. ಇಬ್ಬರಿಗೂ ಪಶುಪ್ರಾಣಿಗಳು ಹೇರಳವಾಗಿದ್ದುದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರಲು ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆಹೋಯಿತು. ಅವರಿಬ್ಬರ ಆಸ್ತಿ ಬಹಳವಾದದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರುವದು ಅಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅವರು ಒಂದಾಗಿ ವಾಸಿಸಲಿಕ್ಕೆ ಆ ಸ್ಥಳ ಸಾಲದೆ ಹೋಯಿತು. ಅವರಿಬ್ಬರ ಸಂಪತ್ತು ಬಹಳವಾಗಿದ್ದರಿಂದ ಒಂದೇ ಸ್ಥಳದಲ್ಲಿ ಅವರು ವಾಸವಾಗಿರಲು ಆಗಲಿಲ್ಲ. ಅಧ್ಯಾಯವನ್ನು ನೋಡಿ |
ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.