ಆದಿಕಾಂಡ 13:7 - ಪರಿಶುದ್ದ ಬೈಬಲ್7 ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇದರಿಂದ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಹುಟ್ಟಿತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.