ಆದಿಕಾಂಡ 13:8 - ಪರಿಶುದ್ದ ಬೈಬಲ್8 ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು. ಅಧ್ಯಾಯವನ್ನು ನೋಡಿ |
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.