Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:13 - ಪರಿಶುದ್ದ ಬೈಬಲ್‌

13 ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:13
23 ತಿಳಿವುಗಳ ಹೋಲಿಕೆ  

ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.


ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದುತಂದ ವಸ್ತುಗಳನ್ನು ತೆಗೆದುಕೊ; ಆನೇರ್, ಎಷ್ಕೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಈ ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು.


ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.


ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.


ಆ ಜನರು ಇಬ್ರಿಯರೇ? ನಾನು ಸಹ ಇಬ್ರಿಯನು. ಅವರು ಇಸ್ರೇಲರೇ? ನಾನು ಸಹ ಇಸ್ರೇಲನು. ಅವರು ಅಬ್ರಹಾಮನ ಕುಟುಂಬಕ್ಕೆ ಸೇರಿದವರೇ? ನಾನು ಸಹ ಅಬ್ರಹಾಮನ ಕುಟುಂಬಕ್ಕೆ ಸೇರಿದವನು.


ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು.


ಆದರೆ ಶೆಬ ದೇಶದವರು ನಮ್ಮ ಮೇಲೆ ಆಕ್ರಮಣ ಮಾಡಿ ನಿನ್ನ ಪಶುಗಳನ್ನೆಲ್ಲಾ ಹೊಡೆದುಕೊಂಡು ಹೋದರು; ನಿನ್ನ ಸೇವಕರುಗಳನ್ನೆಲ್ಲಾ ಕೊಂದು ಹಾಕಿದರು; ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಈ ವಿಷಯವನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.


ಆ ದಿನದಂದು ಬೆನ್ಯಾಮೀನ್ ಕುಲದ ಒಬ್ಬನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.


ಇಸ್ರೇಲರು ಸಂದೇಶಕರನ್ನು ಅಮೋರಿಯರ ಅರಸನಾದ ಸೀಹೋನನ ಬಳಿಗೆ ಕಳುಹಿಸಿದರು. ಅವರು ಅರಸನಿಗೆ,


ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ


ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.


ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು.


ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು.


ಕಾನಾನನು ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ, ಹಿವ್ವಿಯರಿಗೆ, ಅರ್ಕಿಯರಿಗೆ, ಸೀನಿಯರಿಗೆ, ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಮೂಲಪುರುಷನು. ಕಾನಾನನ ಕುಟುಂಬಗಳು ಪ್ರಪಂಚದ ನಾನಾ ಭಾಗಗಳಲ್ಲಿ ಹರಡಿಕೊಂಡಿದ್ದವು.


ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ರಿಯ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು ಗಟ್ಟಿಯಾಗಿ ಕೂಗಿಕೊಂಡೆ.


ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು.


ಆಗ ಅಬ್ರಹಾಮನು ಮತ್ತು ಅಬೀಮೆಲೆಕನು ಒಂದು ಒಪ್ಪಂದವನ್ನು ಮಾಡಿಕೊಂಡರು. ಅಬ್ರಹಾಮನು ಅವನಿಗೆ ಕೆಲವು ದನಕುರಿಗಳನ್ನು ಒಪ್ಪಂದದ ಗುರುತಾಗಿ ಕೊಟ್ಟನು;


ಬೇರ್ಷೆಬದಲ್ಲಿ ಒಪ್ಪಂದವನ್ನು ಮಾಡಿಕೊಂಡ ಮೇಲೆ ಅಬೀಮೆಲೆಕನು ಮತ್ತು ಅವನ ಸೈನ್ಯಾಧಿಕಾರಿಯು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.


“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.


ಬಳಿಕ ಅವರು ಎಷ್ಕೋಲ್ ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಆ ಕೊಂಬೆಯಲ್ಲಿ ದ್ರಾಕ್ಷೆಯ ಗೊಂಚಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತುತಂದರು.


ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ದಾಸದಾಸಿಯರನ್ನು ಬಿಡುಗಡೆ ಮಾಡಬೇಕಾಗಿತ್ತು. ಯೆಹೂದದ ಕುಲದ ಯಾರನ್ನೂ ಗುಲಾಮರನ್ನಾಗಿ ಇಟ್ಟುಕೊಳ್ಳುವಂತಿರಲಿಲ್ಲ.


ಅದಕ್ಕೆ ಅಬ್ರಹಾಮನು, “ನೀನು ನನ್ನನ್ನು ನೋಡಿಕೊಂಡಂತೆ ನಾನೂ ನಿನ್ನನ್ನು ನೋಡಿಕೊಳ್ಳುವೆನು” ಎಂದು ಪ್ರಮಾಣಮಾಡಿದನು.


ಫಿಲಿಷ್ಟಿಯರ ಅಧಿಪತಿಗಳು, “ಈ ಇಬ್ರಿಯರು ಇಲ್ಲಿ ಮಾಡುತ್ತಿರುವುದೇನು?” ಎಂದು ಆಕೀಷನನ್ನು ಕೇಳಿದರು. ಆಕೀಷನು ಫಿಲಿಷ್ಟಿಯರ ಸೇನಾಧಿಪತಿಗಳಿಗೆ, “ಇವನು ದಾವೀದ. ದಾವೀದನು ಸೌಲನ ಅಧಿಕಾರಿಗಳಲ್ಲಿ ಒಬ್ಬನು. ದಾವೀದನು ಬಹಳ ಕಾಲದಿಂದ ನನ್ನೊಡನೆ ಇದ್ದಾನೆ. ದಾವೀದನು ಸೌಲನನ್ನು ತೊರೆದು ನನ್ನ ಬಳಿಗೆ ಬಂದಾಗಿನಿಂದ ನಾನು ಅವನಲ್ಲಿ ಯಾವ ತಪ್ಪುನ್ನೂ ಗುರುತಿಸಿಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು