Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:14 - ಪರಿಶುದ್ದ ಬೈಬಲ್‌

14 ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಬ್ರಾಮನು ತನ್ನ ತಮ್ಮನ ಮಗ ಸೆರೆಗೆ ಸಿಕ್ಕಿರುವುದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದು ಸುಶಿಕ್ಷಿತರಾದ 318 ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟನು. ಈ ನಾಲ್ಕು ಮಂದಿ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತನ್ನ ಸಹೋದರನ ಮಗನು ಸೆರೆಯಾಗಿ ಹೋಗಿರುವುದನ್ನು ಕೇಳಿದಾಗ, ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ, ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ, ದಾನಿನವರೆಗೆ ಹಿಂದಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:14
26 ತಿಳಿವುಗಳ ಹೋಲಿಕೆ  

ದಾನ್ಯರು ಆ ನಗರಕ್ಕೆ ಒಂದು ಹೊಸ ಹೆಸರನ್ನು ಕೊಟ್ಟರು. ಹಿಂದೆ ಅದರ ಹೆಸರು ಲಯಿಷ್ ಎಂದಿತ್ತು. ಆದರೆ ಅವರು ಅದಕ್ಕೆ ದಾನ್ ಎಂದು ಹೆಸರಿಟ್ಟರು. ಅವರು ತಮ್ಮ ಪೂರ್ವಿಕನಾದ ದಾನನ ಸ್ಮರಣಾರ್ಥವಾಗಿ ಆ ಹೆಸರನ್ನಿಟ್ಟರು. ದಾನನು ಇಸ್ರೇಲನ ಮಕ್ಕಳಲ್ಲಿ ಒಬ್ಬನು.


ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು.


ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.


ಮೋಶೆಯು ನೆಬೋ ಬೆಟ್ಟವನ್ನು ಹತ್ತಿದನು. ಅವನು ಮೋವಾಬಿನ ಜೋರ್ಡನ್ ಕಣಿವೆಯಿಂದ ಪಿಸ್ಗಾ ಬೆಟ್ಟದ ಮೇಲಕ್ಕೆ ಬಂದನು. ಇದು ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ಜೆರಿಕೊ ಊರಿನ ಎದುರಿನಲ್ಲಿದೆ. ಯೆಹೋವನು ಮೋಶೆಗೆ ಗಿಲ್ಯಾದಿನಿಂದ ದಾನ್‌ವರೆಗಿದ್ದ ಎಲ್ಲಾ ಪ್ರದೇಶವನ್ನು ತೋರಿಸಿದನು.


ಅಬ್ರಹಾಮನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೆ ಅಂದರೆ ಅವನ ಮನೆಯಲ್ಲಿ ಹುಟ್ಟಿದ ಎಲ್ಲಾ ಸೇವಕರಿಗೆ ಮತ್ತು ಅವನು ಕ್ರಯಕ್ಕೆ ತೆಗೆದುಕೊಂಡಿದ್ದ ಎಲ್ಲಾ ಸೇವಕರಿಗೆ ಸುನ್ನತಿಯಾಯಿತು.


ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.


ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.


“ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! ಸೈನಿಕರು ಯುದ್ಧದಿಂದ ತಂದ ಕೊಳ್ಳೆವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


“ಸ್ವಾಮೀ, ನೀನು ನಮ್ಮ ಮಹಾನಾಯಕರುಗಳಲ್ಲಿ ಒಬ್ಬನು. ತೀರಿಕೊಂಡ ನಿನ್ನ ಹೆಂಡತಿಯ ಸಮಾಧಿಗಾಗಿ ನಮ್ಮಲ್ಲಿರುವ ಸ್ಮಶಾನಗಳಲ್ಲಿ ಅತ್ಯುತ್ತಮವಾದ ಸ್ಥಳವನ್ನು ನೀನು ತೆಗೆದುಕೊಳ್ಳಬಹುದು. ನಿನ್ನ ಹೆಂಡತಿಯನ್ನು ಸಮಾಧಿಮಾಡಲು ನಮ್ಮಲ್ಲಿ ಯಾರೂ ಅಡ್ಡಿ ಮಾಡುವುದಿಲ್ಲ” ಎಂದು ಉತ್ತರಕೊಟ್ಟರು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.


ಅಬ್ರಾಮನು ಸಾರಯಳ ಸಹೋದರನೆಂದು ಭಾವಿಸಿ ಫರೋಹನು ಅಬ್ರಾಮನಿಗೆ ದಯೆತೋರಿದನು. ಫರೋಹನು ಅಬ್ರಾಮನಿಗೆ ದನಕುರಿಗಳನ್ನೂ ಕತ್ತೆಗಳನ್ನೂ ಕೊಟ್ಟನು. ಅಲ್ಲದೆ ಅಬ್ರಾಮನಿಗೆ ದಾಸದಾಸಿಯರನ್ನೂ ಒಂಟೆಗಳನ್ನೂ ಕೊಟ್ಟನು.


ಸ್ನೇಹಿತನು ಯಾವಾಗಲೂ ಪ್ರೀತಿಸುವನು. ಕಷ್ಟದ ಸಮಯಗಳಲ್ಲಿ ಸಹೋದರನು ಸಹಾಯಮಾಡುವನು.


ಅಬ್ರಾಮನ ಸಹೋದರನಾದ ಲೋಟನು ಸೊದೋಮಿನಲ್ಲಿ ವಾಸವಾಗಿದ್ದನು. ಶತ್ರುಗಳು ಅವನನ್ನು ಸೆರೆಹಿಡಿದು, ಅವನ ಸ್ವತ್ತುಗಳನ್ನೆಲ್ಲ ದೋಚಿಕೊಂಡು ಹೋದರು.


ಆಮೇಲೆ ಶತ್ರುಗಳು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಮತ್ತು ಲೋಟನ ಆಸ್ತಿಯನ್ನು ಅಬ್ರಾಮನು ತೆಗೆದುಕೊಂಡು ಲೋಟನೊಡನೆ ಬಂದನು. ಅಲ್ಲದೆ ಸೆರೆಹಿಡಿಯಲ್ಪಟ್ಟಿದ್ದ ಸ್ತ್ರೀಯರನ್ನು ಮತ್ತು ಇತರ ಜನರನ್ನು ಹಿಂದಕ್ಕೆ ಕರೆದುಕೊಂಡು ಬಂದನು.


ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.


ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.


ಆದ್ದರಿಂದ ಯೋಹಾನಾನನು ಮತ್ತು ಅವನೊಂದಿಗಿದ್ದ ಸಕಲ ಸೇನಾಪತಿಗಳು ತಮ್ಮ ಜನರನ್ನು ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ವಿರುದ್ಧ ಹೋರಾಡಲು ಹೊರಟರು. ಅವರು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಇಷ್ಮಾಯೇಲನನ್ನು ಹಿಡಿದರು.


ಏನೂ ಕಳೆದು ಹೋಗಿರಲಿಲ್ಲ. ಅವರು ತಮ್ಮ ಎಲ್ಲ ಮಕ್ಕಳನ್ನೂ ಮುದುಕರನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಮತ್ತೆ ಪಡೆದುಕೊಂಡರು. ಅವರು ತಮ್ಮ ಬೆಲೆಬಾಳುವ ವಸ್ತುಗಳನ್ನೂ ಅಮಾಲೇಕ್ಯರು ತೆಗೆದುಕೊಂಡು ಹೋಗಿದ್ದ ಎಲ್ಲವನ್ನೂ ಮತ್ತೆ ಪಡೆದುಕೊಂಡರು. ಹೀಗೆ ದಾವೀದನು ಎಲ್ಲವನ್ನೂ ತೆಗೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು