ಆದಿಕಾಂಡ 14:19 - ಪರಿಶುದ್ದ ಬೈಬಲ್19 ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇವನು ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನು ಭೂಮಿ, ಆಕಾಶವನ್ನು ಸೃಷ್ಟಿಸಿದ ಮಹೋನ್ನತ ದೇವರಿಂದ ಆಶೀರ್ವಾದ ಹೊಂದಲಿ. ಅಧ್ಯಾಯವನ್ನು ನೋಡಿ |
ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.