Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:20 - ಪರಿಶುದ್ದ ಬೈಬಲ್‌

20 ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.” ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕೀಚೆದೆಕನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪರಾತ್ಪರನಾದ ದೇವರು ನಿನ್ನ ಶತೃಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:20
30 ತಿಳಿವುಗಳ ಹೋಲಿಕೆ  

ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ನಾನಾದರೋ ವಾರದಲ್ಲಿ ಎರಡಾವರ್ತಿ ಉಪವಾಸ ಮಾಡುತ್ತೇನೆ. ಸಂಪಾದಿಸುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ನಿನಗೆ ಕೊಡುತ್ತೇನೆ!’ ಅಂದನು.


ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.


ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.


ದೇವರಿಂದ ಕದ್ದುಕೊಳ್ಳುವದನ್ನು ನಿಲ್ಲಿಸಿರಿ. ಮನುಷ್ಯನು ದೇವರಿಂದ ಕದ್ದುಕೊಳ್ಳಬಾರದು. ಆದರೆ ನೀವು ನನ್ನಿಂದ ಕದ್ದುಕೊಂಡಿದ್ದೀರಿ. “ನಿನ್ನಿಂದ ಏನು ಕದ್ದುಕೊಂಡಿದ್ದೇವೆ” ಎಂದು ಕೇಳುತ್ತೀರಾ? “ನಿಮ್ಮ ದಶಮ ಭಾಗವನ್ನು ನೀವು ನನಗೆ ಅರ್ಪಿಸಬೇಕಿತ್ತು. ವಿಶೇಷ ಕಾಣಿಕೆಗಳನ್ನು ನೀವು ನನಗೆ ಕೊಡಬೇಕಾಗಿತ್ತು. ಆದರೆ ನೀವು ಹಾಗೆ ಮಾಡಲಿಲ್ಲ.


ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ.


ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು.


ನಮ್ಮ ಅನುದಿನದ ಭಾರವನ್ನು ಹೊರುವ ಯೆಹೋವನಿಗೆ ಸ್ತೋತ್ರವಾಗಲಿ! ನಮ್ಮನ್ನು ರಕ್ಷಿಸುವವನು ಆತನೇ.


ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ಆಗ ಯೆಹೂದ ಪ್ರಾಂತ್ಯದ ಪ್ರತಿಯೊಬ್ಬರೂ ತಮ್ಮ ದಶಮಾಂಶ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಮುಂತಾದವುಗಳನ್ನು ತಂದುಕೊಟ್ಟರು. ಅವುಗಳನ್ನು ಉಗ್ರಾಣಗಳಲ್ಲಿ ಶೇಖರಿಸಿಡಲಾಯಿತು.


“ಪ್ರಥಮ ಫಲದ ಹಿಟ್ಟನ್ನು, ಪ್ರಥಮ ಫಲದ ಹಣ್ಣುಗಳನ್ನು, ಹೊಸ ದ್ರಾಕ್ಷಾರಸವನ್ನು, ಹೊಸ ಎಣ್ಣೆಯನ್ನು ಯಾಜಕರಿಗೋಸ್ಕರವಾಗಿ ದೇವಾಲಯದ ಉಗ್ರಾಣಗಳಲ್ಲಿ ತಂದಿಡುವೆವು. ನಮ್ಮ ಬೆಳೆಗಳಲ್ಲಿ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ತಂದುಕೊಡುವೆವು. ನಾವು ಕೆಲಸ ಮಾಡುತ್ತಿರುವ ಊರುಗಳಿಂದ ಲೇವಿಯರು ಇವುಗಳನ್ನು ತೆಗೆದುಕೊಳ್ಳಬೇಕು.


ಆ ಬಳಿಕ ದೇವರಿಗೆ ಕೊಟ್ಟಿದ್ದ ದಶಮಾಂಶ ಮತ್ತು ಬೇರೆ ಕಾಣಿಕೆಗಳನ್ನು ಆ ಉಗ್ರಾಣದ ಕೋಣೆಗಳಲ್ಲಿ ಕೂಡಿಸಿಟ್ಟರು. ಲೇವಿಯನಾದ ಕೋನನ್ಯನು ಇದರ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟನು. ಇವನಿಗೆ ಸಹಾಯಕನಾಗಿ ಕೋನನ್ಯನ ಸೋದರನಾದ ಶಿಮ್ಮಿಯು ನೇಮಿಸಲ್ಪಟ್ಟನು.


ಯೆಹೋಶುವನು ಆ ಎಲ್ಲ ಪಟ್ಟಣಗಳನ್ನು ಮತ್ತು ಅವುಗಳ ಅರಸರನ್ನು ಒಂದೇ ದಂಡೆಯಾತ್ರೆಯಲ್ಲಿ ಸ್ವಾಧೀನಪಡಿಸಿಕೊಂಡನು. ಇಸ್ರೇಲಿನ ದೇವರಾದ ಯೆಹೋವನು ಇಸ್ರೇಲಿನವರಿಗಾಗಿ ಯುದ್ಧ ಮಾಡುತ್ತಿದ್ದುದರಿಂದ ಯೆಹೋಶುವನಿಗೆ ಇದು ಸಾಧ್ಯವಾಯಿತು.


“ಮೂರು ವರ್ಷಕ್ಕೊಮ್ಮೆ ನಿಮ್ಮ ದವಸಧಾನ್ಯಗಳ ಹತ್ತನೆಯ ಒಂದು ಭಾಗವನ್ನು ನಿಮ್ಮ ಊರಿನಲ್ಲಿ ಶೇಖರಿಸಿಡಿರಿ.


ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.


“ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.


“ನಿಮ್ಮ ಪ್ರಥಮಫಲಗಳ ಹಬ್ಬದಲ್ಲಿ ಅಂದರೆ ವಾರಗಳ ಹಬ್ಬದಲ್ಲಿ ನೀವು ಹೊಸದಾಗಿ ಬೆಳೆದ ಗೋಧಿಯನ್ನು ಯೆಹೋವನಿಗೆ ಅರ್ಪಿಸುವಾಗ, ದೇವರನ್ನು ಆರಾಧಿಸಲು ನೀವು ಸಭೆ ಸೇರಬೇಕು. ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.


ಅಲ್ಲದೆ ನೋಹನು, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಕಾನಾನನು ಶೇಮನಿಗೆ ಗುಲಾಮನಾಗಿರಲಿ.


ಬಳಿಕ ಸೊದೋಮಿನ ರಾಜನು ಅಬ್ರಾಮನಿಗೆ, “ಈ ವಸ್ತುಗಳನ್ನೆಲ್ಲ ನೀನೇ ಇಟ್ಟುಕೊ. ಶತ್ರುಗಳು ವಶಪಡಿಸಿಕೊಂಡಿರುವ ನನ್ನ ಜನರನ್ನು ಮಾತ್ರ ನನಗೆ ಕೊಡು” ಎಂದು ಹೇಳಿದನು.


ಇತ್ರೋನನು, “ಯೆಹೋವನನ್ನು ಸ್ತುತಿಸಿರಿ! ಆತನು ನಿಮ್ಮನ್ನು ಫರೋಹನಿಂದಲೂ ಈಜಿಪ್ಟಿನಿಂದಲೂ ರಕ್ಷಿಸಿದನು.


ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು.


ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.


ಅಹೀಮಾಚನು ರಾಜನ ಬಳಿಗೆ ಬಂದು, “ಎಲ್ಲವೂ ಶುಭಕರವಾಗಿದೆ” ಎಂದು ಹೇಳಿ ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಅಹೀಮಾಚನು, “ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ರಾಜನಾದ ಒಡೆಯನೇ, ನಿನ್ನ ವಿರುದ್ಧವಾಗಿದ್ದ ಜನರನ್ನು ಯೆಹೋವನು ಸೋಲಿಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು