Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:4 - ಪರಿಶುದ್ದ ಬೈಬಲ್‌

4 ಈ ರಾಜರುಗಳು ಕೆದೊರ್ಲಗೋಮರನ ಅಧೀನದಲ್ಲಿ ಹನ್ನೆರಡು ವರ್ಷವಿದ್ದರು. ಆದರೆ ಹದಿಮೂರನೆಯ ವರ್ಷದಲ್ಲಿ, ಅವರೆಲ್ಲರೂ ಅವನಿಗೆ ವಿರೋಧವಾಗಿ ದಂಗೆ ಎದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷಕಾಲ ಕೆದೊರ್ಲಗೋಮರನಿಗೆ ಅಧೀನರಾಗಿ ಇದ್ದರು. ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೆರಗ ಮೊದಲಾದ ಇವರು ಹನ್ನೆರಡು ವರುಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರುಷದಲ್ಲಿ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಸೇವೆಮಾಡಿ, ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:4
5 ತಿಳಿವುಗಳ ಹೋಲಿಕೆ  

ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”


ಆ ದಿನಗಳಲ್ಲಿ ಅಮ್ರಾಫೆಲನು ಶಿನಾರಿನ ರಾಜನಾಗಿದ್ದನು; ಅರಿಯೋಕನು ಎಲ್ಲಸಾರಿನ ರಾಜನಾಗಿದ್ದನು; ಕೆದೊರ್ಲಗೋಮರನು ಏಲಾಮಿನ ರಾಜನಾಗಿದ್ದನು; ತಿದ್ಗಾಲನು ಗೋಯಿಮದ ರಾಜನಾಗಿದ್ದನು.


ಈ ರಾಜರುಗಳೆಲ್ಲ ಸಿದ್ದೀಮ್ ಕಣಿವೆಯಲ್ಲಿ ತಮ್ಮ ಸೈನ್ಯಗಳನ್ನು ಒಟ್ಟಿಗೆ ಸೇರಿಸಿದರು. (ಸಿದ್ದೀಮ್ ಕಣಿವೆಯು ಈಗ ಉಪ್ಪುಸಮುದ್ರವಾಗಿದೆ).


ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು