ಆದಿಕಾಂಡ 14:6 - ಪರಿಶುದ್ದ ಬೈಬಲ್6 ಇದಲ್ಲದೆ ಅವರು ಹೋರಿಯರನ್ನು ಬೆಟ್ಟದ ಸೀಮೆಯಿಂದ ಮರುಭೂಮಿಯ ಸಮೀಪದಲ್ಲಿರುವ ಎಲ್ಪಾರಾನಿನವರೆಗೂ ಹಿಂದಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ ಎದೋಮ್ ಗುಡ್ಡ ಪ್ರಾಂತ್ಯದಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ, ಮರಳುಗಾಡಿಗೆ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ ಮರಳುಕಾಡಿನ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರ ಬೆಟ್ಟವಾದ ಸೇಯೀರನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸಮೀಪವಾದ ಏಲ್ಪಾರಾನಿನವರೆಗೂ ಅವರನ್ನು ಸೋಲಿಸಿದರು. ಅಧ್ಯಾಯವನ್ನು ನೋಡಿ |
ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.