Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:8 - ಪರಿಶುದ್ದ ಬೈಬಲ್‌

8 ಆ ಕಾಲದಲ್ಲಿ, ಸೊದೋಮಿನ ರಾಜನೂ ಗೊಮೋರದ ರಾಜನೂ ಅದ್ಮಾಹದ ರಾಜನೂ ಚೆಬೋಯೀಮಿನ ರಾಜನೂ ಬೇಲಗದ, ಅಂದರೆ ಚೋಗರದ ರಾಜನೂ ಒಟ್ಟಾಗಿ ಸೇರಿಕೊಂಡು ತಮ್ಮ ಶತ್ರುಗಳ ವಿರುದ್ಧವಾಗಿ ದಂಡೆತ್ತಿಕೊಂಡು ಸಿದ್ದೀಮ್ ಕಣಿವೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್, ಚೋಗರ್ ಎಂಬ ಬೇಲಗ್ ಈ ಪಟ್ಟಣಗಳ ರಾಜರು ಹೊರಟು ಅವರಿಗೆದುರಾಗಿ, ಅಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯೀಮ್, ಚೋಗರೆಂಬ ಬೇಲಗ್ ಈ ಪಟ್ಟಣಗಳ ರಾಜರು ಹೊರಟು ಅವರಿಗೆದುರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಿಮಿನ ಅರಸನೂ ಚೋಗರೆಂಬ ಬೆಲಗದ ಅರಸನೂ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:8
8 ತಿಳಿವುಗಳ ಹೋಲಿಕೆ  

ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕೆಂದರೆ ಅದು ಚಿಕ್ಕ ಊರು.)


ಅಗೋ, ಅಲ್ಲಿ ಒಂದು ಚಿಕ್ಕ ಊರಿದೆ. ಆ ಊರಿಗೆ ಓಡಿಹೋಗಲು ನನಗೆ ಅಪ್ಪಣೆಕೊಡಿ. ನಾನು ಅಲ್ಲಿಗೆ ಓಡಿಹೋಗಿ ಸುರಕ್ಷಿತವಾಗಿರುವೆನು” ಎಂದು ಹೇಳಿದನು.


ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ಸಿದ್ದೀಮ್ ಕಣಿವೆಯಲ್ಲಿ ಕಲ್ಲರಗಿನ ಕೆಸರುಕುಣಿಗಳು ಬಹಳಷ್ಟಿದ್ದವು. ಸೊದೋಮ್ ಮತ್ತು ಗೊಮೋರಗಳ ರಾಜರುಗಳು ಮತ್ತು ಅವರ ಸೈನ್ಯಗಳವರು ಓಡಿಹೋಗುವಾಗ ಈ ಕುಣಿಗಳಲ್ಲಿ ಬಿದ್ದುಹೋದರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.


ಅವರು ಏಲಾಮಿನ ರಾಜ ಕೆದೊರ್ಲಗೋಮರನಿಗೂ ಗೋಯಿಮದ ರಾಜ ತಿದ್ಗಾಲನಿಗೂ ಶಿನಾರಿನ ರಾಜ ಅಮ್ರಾಫೆಲನಿಗೂ, ಎಲ್ಲಸಾರಿನ ರಾಜ ಅರಿಯೋಕನಿಗೂ ವಿರುದ್ಧವಾಗಿ ಹೋರಾಡಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರ ವಿರುದ್ಧವಾಗಿ ಹೋರಾಡಿದರು.


“ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು